ADVERTISEMENT

‘ಧರ್ಮ ಪಾಲನೆಯಿಂದ ಬದುಕಿಗೆ ನೆಮ್ಮದಿ’

​ಪ್ರಜಾವಾಣಿ ವಾರ್ತೆ
Published 4 ಮಾರ್ಚ್ 2014, 9:46 IST
Last Updated 4 ಮಾರ್ಚ್ 2014, 9:46 IST

ಶಿವಮೊಗ್ಗ: ಅಶಾಂತಿಯಿಂದ ತತ್ತರಿಸುತ್ತಿರುವ ಮಾನವ ಬದುಕಿಗೆ ಧರ್ಮ ಪರಿಪಾಲನೆಯಿಂದ ಮಾತ್ರ ನೆಮ್ಮದಿ ಸಿಗಲು ಸಾಧ್ಯ ಎಂದು ಬಾಳೆಹೊನ್ನೂರು ರಂಭಾಪುರಿ ಪ್ರಸನ್ನ ರೇಣುಕ ವೀರಸೋಮೇಶ್ವರ ಶಿವಾಚಾರ್ಯ ಸ್ವಾಮೀಜಿ ಅಭಿಪ್ರಾಯಪಟ್ಟರು.

ಮಂಗಳವಾರ ತಾಲ್ಲೂಕಿನ ಗಾಜನೂರು ಮುಳ್ಳುಕೆರೆ ಗ್ರಾಮದ ವೀರಭದ್ರಸ್ವಾಮಿ ಪುನರ್ ಪ್ರತಿಷ್ಠಾಪನಾ ಧರ್ಮ ಸಮಾರಂಭದ ನೇತೃತ್ವ ವಹಿಸಿ ಅವರು ಮಾತನಾಡಿದರು.

ಮಾನವ ಜೀವನ ಉನ್ನತಿಗೆ ಮತ್ತು ಶ್ರೇಯಸ್ಸಿಗೆ ಧರ್ಮವೇ ಮೂಲ. ಎಲ್ಲ ಸಮುದಾಯದ ಜನತೆಗೆ ಈ ಧರ್ಮಸೂತ್ರಗಳು ಅನ್ವಯಿಸುತ್ತವೆ. ಅಮೂಲ್ಯವಾದ ಮಾನವ ಜನ್ಮ ಸಾರ್ಥಕಗೊಳ್ಳಬೇಕು. ಬದುಕಿನ
ವಿಕಾಸ ಮತ್ತು ನೆಮ್ಮದಿಯ ಬದುಕಿಗೆ ಧರ್ಮ ಪರಿಪಾಲನೆ ಅಗತ್ಯ. ನಂಬಿಗೆ ಮತ್ತು ವಿಶ್ವಾಸದಿಂದ ನಡೆದು ಶಾಂತಿ ಕಾಣುವಂತಾಗಬೇಕು ಎಂದು ಅವರು ಅಭಿಪ್ರಾಯಪಟ್ಟರು.

ಸಮಾರಂಭದಲ್ಲಿ ಬಿಳಕಿ ಹಿರೇಮಠದ ರಾಚೋಟೇಶ್ವರ ಶಿವಾಚಾರ್ಯ ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.