ADVERTISEMENT

ಸುರಭಿ ಗೋಶಾಲೆಯ ಪ್ರವೇಶೋತ್ಸವ 30ಕ್ಕೆ

​ಪ್ರಜಾವಾಣಿ ವಾರ್ತೆ
Published 27 ನವೆಂಬರ್ 2020, 16:32 IST
Last Updated 27 ನವೆಂಬರ್ 2020, 16:32 IST

ಶಿವಮೊಗ್ಗ: ನಗರದ ಸಮೀಪದಲ್ಲಿರುವ ಮಂಡೇನಕೊಪ್ಪದಲ್ಲಿ ಜಿಲ್ಲಾ ಬ್ರಾಹ್ಮಣ ಮಹಾಸಭಾದಿಂದ ನ.30ರಂದು ಸುರಭಿ ಗೋಶಾಲೆಯ ಪ್ರವೇಶೋತ್ಸವ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಮಹಾಸಭಾದ ಅಧ್ಯಕ್ಷ ಕೆ.ಸಿ. ನಟರಾಜ್ ಭಾಗವತ್ ಹೇಳಿದರು.

‘ಗೋ ಪ್ರವೇಶೋತ್ಸವ ನ.30ರ ಸಂಜೆ 5.53ರಿಂದ 6ರವರೆಗೆ ನಡೆಯಲಿದ್ದು, ಬಾಳಗಾರು ಆರ್ಯ ಅಕ್ಷೋಭ್ಯ ತೀರ್ಥ ಮಠದ ರಘುಭೂಷಣ ತೀರ್ಥ ಶ್ರೀಪಾದರು ಸಾನ್ನಿಧ್ಯ ವಹಿಸುವರು. ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್. ಈಶ್ವರಪ್ಪ, ಸಂಸದ ಬಿ.ವೈ.ರಾಘವೇಂದ್ರ, ಶಾಸಕ ಆರಗ ಜ್ಞಾನೇಂದ್ರ, ಉಪ ಮೇಯರ್ ಸುರೇಖಾ ಮುರಳೀಧರ್, ಜಿಲ್ಲಾ ಪಂಚಾಯಿತಿ ಸದಸ್ಯೆ ಹೇಮಾವತಿ ಶಿವಲಿಂಗಪ್ಪ, ತಾಲ್ಲೂಕು ಪಂಚಾಯಿತಿ ಸದಸ್ಯ ಮುನಿರತ್ನ, ಮಾಜಿ ವಿಧಾನಪರಿಷತ್ ಸದಸ್ಯ ಎಂ.ಬಿ. ಭಾನುಪ್ರಕಾಶ್, ಗಾಯಿತ್ರಿ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಚ್.ವಿ. ಸುಬ್ರಮಣ್ಯ ಪಾಲ್ಗೊಳ್ಳಲಿದ್ದಾರೆ’ ಎಂದು ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಗೋಶಾಲೆಗಾಗಿ 9 ಎಕರೆ ಭೂಮಿಯನ್ನು ಗುತ್ತಿಗೆ ಪಡೆಯಲಾಗಿದೆ. ಶುದ್ಧ ಗೋಮೂತ್ರ ಸಂಗ್ರಹ ಹಾಗೂ ಸಾವಯವ ಗೊಬ್ಬರ ಸಂಗ್ರಹಣೆಗೆ ವ್ಯವಸ್ಥೆ ಮಾಡಲಾಗಿದೆ ಎಂದರು.

ADVERTISEMENT

ಉಪಮೇಯರ್ ಸುರೇಖಾ ಮುರಳೀಧರ್, ಕೇಶವಮೂರ್ತಿ, ಶಂಕರನಾರಾಯಣ, ಉಷಾ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.