ADVERTISEMENT

21ರಂದು ರುದ್ರಮುನಿ ಶಿವಯೋಗಿಗಳ 33ನೇ ಪುಣ್ಯಸ್ಮರಣೆ: ಕೆ.ಜಿ. ರುದ್ರಪ್ಪಯ್ಯ

​ಪ್ರಜಾವಾಣಿ ವಾರ್ತೆ
Published 19 ಅಕ್ಟೋಬರ್ 2021, 7:03 IST
Last Updated 19 ಅಕ್ಟೋಬರ್ 2021, 7:03 IST
ರುದ್ರಮುನಿ ಸ್ವಾಮೀಜಿ
ರುದ್ರಮುನಿ ಸ್ವಾಮೀಜಿ   

ಶಿಕಾರಿಪುರ: ತಾಲ್ಲೂಕಿನ ಕಾಳೇನಹಳ್ಳಿ ಶಿವಯೋಗಾಶ್ರಮದಲ್ಲಿ ಅ.21ರಂದು ಬೆಳಿಗ್ಗೆ 10.30ಕ್ಕೆ ಶಿವಯೋಗಾಶ್ರಮದ ಪ್ರಥಮ ಪೀಠಾಧ್ಯಕ್ಷ ರುದ್ರಮುನಿ ಶಿವಯೋಗಿಗಳ 33ನೇ ಪುಣ್ಯಸ್ಮರಣೆ ಕಾರ್ಯಕ್ರಮ ನಡೆಯಲಿದೆ ಎಂದು ಕಾಳೇನಹಳ್ಳಿ ಶಿವಯೋಗಾಶ್ರಮ ನಿತ್ಯ ದಾಸೋಹ ಸಮಿತಿ ಅಧ್ಯಕ್ಷ ಕೆ.ಜಿ. ರುದ್ರಪ್ಪಯ್ಯ ತಿಳಿಸಿದರು.

‘ಸಂಸದ ಬಿ.ವೈ. ರಾಘವೇಂದ್ರ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದು, ವಿಧಾನಪರಿಷತ್ ಸದಸ್ಯ ಎಸ್. ರುದ್ರೇಗೌಡ್ರು, ಮಲೆನಾಡು ಪ್ರದೇಶಾಭಿವೃದ್ಧಿ ಮಂಡಳಿ ಅಧ್ಯಕ್ಷ ಕೆ.ಎಸ್. ಗುರುಮೂರ್ತಿ, ಕುವೆಂಪು ವಿವಿ ಕುಲಪತಿ ಪ್ರೊ. ವೀರಭದ್ರಪ್ಪ, ಗೋಣಿಬೀಡು ಶಿಲಸಂಪಾದನಾಮಠ ಕಾರ್ಯಾಧ್ಯಕ್ಷ ದಯಾಶಂಕರ್, ಪೋಷಕ ಜೆಡಿಸ್ ಪ್ರಧಾನ ಕಾರ್ಯದರ್ಶಿ ಎಂ. ಶ್ರೀಕಾಂತ್ ಪಾಲ್ಗೊಳ್ಳಲಿದ್ದಾರೆ ಎಂದು ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

ಹುಬ್ಬಳ್ಳಿ ಮೂರು ಸಾವಿರ ಮಠದ ಪೀಠಾಧ್ಯಕ್ಷ ಡಾ.ಗುರುಸಿದ್ಧರಾಜ ಯೋಗೀಂದ್ರ ಸ್ವಾಮೀಜಿ, ಹೊಸಪೇಟೆ ಕೊಟ್ಟೂರು ಸ್ವಾಮಿ ಮಹಾಸಂಸ್ಥಾನದ ಪೀಠಾಧ್ಯಕ್ಷ ಡಾ.ಸಂಗನಬಸವ ಸ್ವಾಮೀಜಿ, ಜಡೆ ಮಹಾಸಂಸ್ಥಾನ ಪೀಠಾಧ್ಯಕ್ಷ ಡಾ. ಮಹಾಂತ ಸ್ವಾಮೀಜಿ, ಹರಪನಹಳ್ಳಿ ತಗ್ಗಿನ ಮಠದ ವರಸದ್ಯೋಜಾತ ಶಿವಾಚಾರ್ಯ ಸ್ವಾಮೀಜಿ, ಮೂಲೆಗದ್ದೆ ಸದಾನಂದ ಶಿವಯೋಗಾಶ್ರಮದ ಪೀಠಾಧ್ಯಕ್ಷ ಚನ್ನಬಸವ ಸ್ವಾಮೀಜಿ, ಕಾಳೇನಹಳ್ಳಿ ಶಿವಯೋಗಾಶ್ರಮದ ಪೀಠಾಧ್ಯಕ್ಷ ಸಿದ್ಧಲಿಂಗ ಸ್ವಾಮೀಜಿ ಪುಣ್ಯಸ್ಮರಣೆ ಕಾರ್ಯಕ್ರಮದ ನೇತೃತ್ವ ವಹಿಸಲಿದ್ದಾರೆ. ಹಾವೇರಿ ಹುಕ್ಕೇರಿ ಮಠದ ಪೀಠಾಧ್ಯಕ್ಷ ಸದಾಶಿವ ಸ್ವಾಮೀಜಿ ಅಧ್ಯಕ್ಷತೆ ವಹಿಸಲಿದ್ದಾರೆ. ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕು ಎಂದು ಮನವಿ ಮಾಡಿದರು.

ADVERTISEMENT

ತಾಲ್ಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ಕೆ.ಪಿ. ರುದ್ರಪ್ಪ, ತಾಲ್ಲೂಕು ಜಂಗಮ ಸಮಾಜ ಅಧ್ಯಕ್ಷ ಪುಟ್ಟಸ್ವಾಮಿ, ಅಖಿಲ ಭಾರತ ವೀರಶೈವ ಮಹಾಸಭಾ ಜಿಲ್ಲಾ ಕಾರ್ಯದರ್ಶಿ ಕೊಟ್ರೇಶಪ್ಪ, ನಿರ್ದೇಶಕ ಕುಮಾರಸ್ವಾಮಿ ಹಿರೇಮಠ್, ಯುವ ಘಟಕ ಉಪಾಧ್ಯಕ್ಷ ಹದಡಿ ಪ್ರವೀಣ್ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.