ADVERTISEMENT

‘ಎಪಿಎಂಸಿಯಲ್ಲಿ ಕೃಷಿ ಉತ್ಪನ್ನಗಳ ಮಾರಾಟಕ್ಕೆ ಸ್ಥಳಾವಕಾಶ ನೀಡಿ’

​ಪ್ರಜಾವಾಣಿ ವಾರ್ತೆ
Published 2 ಜನವರಿ 2018, 6:07 IST
Last Updated 2 ಜನವರಿ 2018, 6:07 IST

ಶಿವಮೊಗ್ಗ: ಎಪಿಎಂಸಿ ವ್ಯಾಪ್ತಿಯಲ್ಲಿ ಕೃಷಿ ಉತ್ಪನ್ನಗಳ ಮಾರಾಟದ ಜತೆಗೆ ಬೇರೆ ವಸ್ತುಗಳನ್ನು ಮಾರಾಟ ಮಾಡುತ್ತಿದ್ದು, ಕೃಷಿ ಉತ್ಪನ್ನಗಳ ಮಾರಾಟಕ್ಕೆ ಸ್ಥಳಾವಕಾಶ ಹಾಗೂ ಆದ್ಯತೆ ನೀಡದೆ ಇರುವುದರಿಂದ ರೈತರಿಗೆ ಅನ್ಯಾಯವಾಗಿದೆ ಎಂದು ರಾಜ್ಯ ರೈತ ಸಂಘ ಹಾಗೂ ಹಸಿರುಸೇನೆಯ ಜಿಲ್ಲಾ ಘಟಕದ ಅಧ್ಯಕ್ಷ ವೈ.ಜಿ. ಮಲ್ಲಿಕಾರ್ಜುನ ಎಂದು ದೂರಿದರು.

ಭತ್ತ, ರಾಗಿ, ಮೆಕ್ಕೆಜೋಳ ಸೇರಿದಂತೆ ಬಹುತೇಕ ವ್ಯಾಪಾರಸ್ಥರು ಎಪಿಎಂಸಿ ಪ್ರಾಂಗಣದಲ್ಲಿ ಮಾರಾಟ ಮಾಡದೆ, ಹೊರಗಡೆ ಮಾರಾಟ ಮಾಡುತ್ತಿದ್ದಾರೆ. ಇದರಿಂದಾಗಿ ರೈತರಿಗೆ ಆರ್ಥಿಕ ಭದ್ರತೆ ಹಾಗೂ ಕೃಷಿ ಉತ್ಪನ್ನ ಮಾರಾಟ ಮಾಡಿದ ಹಣಕ್ಕೆ ತೊಂದರೆಯಾಗುತ್ತಿದೆ. ಕೃಷಿ ಉತ್ಪನ್ನಗಳನ್ನು ಎಪಿಎಂಸಿಯಲ್ಲಿ ಮಾರಾಟ ಮಾಡಲು ಕ್ರಮ ಕೈಗೊಳ್ಳಬೇಕು ಎಂದು ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಆಗ್ರಹಿಸಿದರು.

15 ದಿನಗಳಲ್ಲಿ ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳದಿದ್ದಲ್ಲಿ ಎಪಿಎಂಸಿ ಕಚೇರಿ ಎದುರು ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದು ಎಚ್ಚರಿಸಿದರು. ಪತ್ರಿಕಾಗೋಷ್ಠಿಯಲ್ಲಿ ಹಸಿರುಸೇನೆ ರಾಜ್ಯ ಸಂಚಾಲಕ ವಸಂತಕುಮಾರ್, ಚಂದ್ರಪ್ಪ, ತುಂಗರಾಜ್, ಎನ್.ಕೆ.ರವಿಕುಮಾರ್ ಉಪಸ್ಥಿತರಿದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.