ADVERTISEMENT

₹ 200 ಕೋಟಿ ವೆಚ್ಚದಲ್ಲಿ ಲೋಕೋಪಯೋಗಿ ರಸ್ತೆ ಅಭಿವೃದ್ಧಿ

​ಪ್ರಜಾವಾಣಿ ವಾರ್ತೆ
Published 2 ಫೆಬ್ರುವರಿ 2018, 6:59 IST
Last Updated 2 ಫೆಬ್ರುವರಿ 2018, 6:59 IST

ಸೊರಬ: ತಾಲ್ಲೂಕಿನ ಗ್ರಾಮಗಳ ರಸ್ತೆ ಅಭಿವೃದ್ಧಿಗಾಗಿ ಸರ್ಕಾರದಿಂದ ಅನುದಾನ ತರುವಲ್ಲಿ ಶಕ್ತಿಮೀರಿ ಪ್ರಯತ್ನ ಮಾಡುತ್ತಿರುವೆ ಎಂದು ಶಾಸಕ ಮಧು ಬಂಗಾರಪ್ಪ ಹೇಳಿದರು.

ಈಚೆಗೆ ತಾಲ್ಲೂಕಿನ ದ್ಯಾವನಹಳ್ಳಿ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ವಿವಿಧ ಕಾಮಗಾರಿಗಳ ಉದ್ಘಾಟನೆ ಹಾಗೂ ದ್ಯಾವನಹಳ್ಳಿ ಗ್ರಾಮದಲ್ಲಿ ನಮ್ಮ ಗ್ರಾಮ ನಮ್ಮ ರಸ್ತೆ ಯೋಜನೆಯಡಿ ₹ 1. 12 ಕೋಟಿ ವೆಚ್ಚದ ರಸ್ತೆ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿ ಅವರು ಮಾತನಾಡಿದರು.

ಮೂಲ ಸೌಲಭ್ಯ ಅಭಿವೃದ್ಧಿಗಳಿಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದ್ದು, ಬಹು ವರ್ಷಗಳಿಂದ ಅಭಿವೃದ್ಧಿಯಾಗದ ರಸ್ತೆಗಳಿಗೆ ವಿಶೇಷ ಕಾಳಜಿ ವಹಿಸಿ ಡಾಂಬರೀಕರಣ ಮಾಡಲಾಗಿದೆ ಎಂದರು.

ADVERTISEMENT

ಸರ್ಕಾರದಿಂದ ರಸ್ತೆಗಳು ಸೇರಿದಂತೆ ಇತರ ಅಭಿವೃದ್ಧಿಗೆ ಬಿಡುಗಡೆಯಾಗುವ ಅನುದಾನ ಕಡಿಮೆಯಾಗುತ್ತಿದ್ದು, ನಿರೀಕ್ಷಿತ ಮಟ್ಟದಲ್ಲಿ ಕಾಮಗಾರಿಗಳಿಗೆ ವೇಗ ದೊರೆಯುತ್ತಿಲ್ಲ. ನಮ್ಮ ಗ್ರಾಮ ನಮ್ಮ ರಸ್ತೆ ಯೋಜನೆಯಡಿ ಬಹುತೇಕ ಗ್ರಾಮಗಳ ಅಭಿವೃದ್ಧಿಪಡಿಸಲಾಗಿದೆ ಎಂದರು.

ನಾಲ್ಕೂವರೆ ವರ್ಷದ ಅವಧಿಯಲ್ಲಿ ಲೋಕೋಪಯೋಗಿ ಇಲಾಖೆಗೆ ಒಳಪಡುವ ರಸ್ತೆಗಳನ್ನು ಸುಮಾರು ₹ 200 ಕೋಟಿಗೂ ಅಧಿಕ ವೆಚ್ಚದಲ್ಲಿ ಅಭಿವೃದ್ಧಿಪಡಿಸಲಾಗಿದೆ ಎಂದ ಅವರು, ಪ್ರತಿಯೊಂದು ಗ್ರಾಮಗಳ ಅಭಿವೃದ್ಧಿಗೆ ಶಕ್ತಿಮೀರಿ ಪ್ರಯತ್ನಿಸಲಾಗುತ್ತಿದ್ದು, ಉಳಿದಿರುವ ಸಣ್ಣಪುಟ್ಟ ರಸ್ತೆಗಳಿಗೆ ಹೆಚ್ಚುವರಿ ಅನುದಾನ ತಂದು ಹಂತ ಹಂತವಾಗಿ ಅಭಿವೃದ್ಧಿ ಪಡಿಸಲಾಗುವುದು. ಈ ನಿಟ್ಟಿನಲ್ಲಿ ಗ್ರಾಮಸ್ಥರು ಸಹಕಾರ ನೀಡಬೇಕು ಎಂದರು.

ಜಿಲ್ಲಾ ಪಂಚಾಯ್ತಿ ಸದಸ್ಯ ಶಿವಲಿಂಗಗೌಡ್ರು ಮಾತನಾಡಿ, ಶಾಸಕ ಮದು ಬಂಗಾರಪ್ಪ ಅವರು ತಾಲ್ಲೂಕಿನ ಅಭಿವೃದ್ಧಿಗೆ ಹಾಗೂ ವಿವಿಧ ಕಾಮಗಾರಿಗೆ ಹೆಚ್ಚಿನ ಅನುದಾನ ತರುವಲ್ಲಿ ಶ್ರಮವಹಿಸಿದ್ದು, ಅವರ ಅಭಿವೃದ್ಧಿ ಕಾರ್ಯಗಳನ್ನು ವಿರೋಧ ಪಕ್ಷದವರು ಮೆಚ್ಚಿಕೊಳ್ಳುತ್ತಿದ್ದಾರೆ ಎಂದರು. ಎಪಿಎಂಸಿ ಅಧ್ಯಕ್ಷ ರಾಜಶೇಖರ್ ಕುಪ್ಪಗಡ್ಡೆ, ಸದಸ್ಯ ನೀಲಕಂಠಗೌಡ್ರು, ತಾಲ್ಲೂಕು ಪಂಚಾಯ್ತಿ ಸದಸ್ಯ ಪುರುಷೋತ್ತಮ ಕುಪ್ಪಗಡ್ಡೆ, ಮೋಹನ ಜಡ್ಡಿಹಳ್ಳಿ,

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.