
ಪ್ರಜಾವಾಣಿ ವಾರ್ತೆ
ಸಿಗಂದೂರು ಕೇಬಲ್ ಸೇತುವೆ
ತುಮರಿ: ಸಮೀಪದ ಸಿಗಂದೂರು ಚೌಡೇಶ್ವರಿ ಸೇತುವೆ ಮೇಲಿನಿಂದ ಜಿಗಿದು ಭಾನುವಾರ ಆತ್ಮಹತ್ಯೆಗೆ ಯತ್ನಿಸಿದ್ದ ಮೈಸೂರು ಮೂಲದ ವ್ಯಕ್ತಿಯನ್ನು ಸ್ಥಳೀಯರು ಹಾಗೂ ಸೇತುವೆ ನಿರ್ಮಾಣ ಸಿಬ್ಬಂದಿ ಸಮಯ ಪ್ರಜ್ಞೆ ತೋರಿ ರಕ್ಷಿಸಿದ್ದಾರೆ.
ಆಂಜನೇಯ (40) ಆತ್ಮಹತ್ಯೆಗೆ ಯತ್ನಿಸಿದ್ದ ವ್ಯಕ್ತಿ. ಇವರು ಮೈಸೂರಿನ ಸರ್ಕಾರಿ ಕಚೇರಿಯೊಂದರಲ್ಲಿ ಕೆಲಸ ಮಾಡುತ್ತಿದ್ದಾರೆ ಎಂದು ತಿಳಿದು ಬಂದಿದೆ.
ಇಲ್ಲಿನ ಬ್ಯಾಕೋಡು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದ್ದು, ವೈಯಕ್ತಿಕ ಕಾರಣಗಳಿಂದ ಅತ್ಮಹತ್ಯೆಗೆ ಯತ್ನಿಸಿರುವುದಾಗಿ ಪೋಲಿಸರು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.