ಶಿವಮೊಗ್ಗ: ಕೇಂದ್ರ ಕಾರಾಗೃಹದ ಕೈದಿ ಅಲ್ಲಿನ ಶೌಚಾಲಯದಲ್ಲಿ ಶುಕ್ರವಾರ ರಾತ್ರಿ ನೇಣಿಗೆ ಶರಣಾಗಿದ್ದಾರೆ.
ಸಾಗರದ ಎಸ್.ಎಸ್ ಕಾಲೊನಿಯ ಮಂಜುನಾಥ್ (33) ಆತ್ಮಹತ್ಯೆ ಮಾಡಿಕೊಂಡವರು.
ಜೈಲಿನ ತುಂಗಾ ವಿಭಾಗದ ಕೊಠಡಿ ಸಂಖ್ಯೆ 35ರಲ್ಲಿನ ಶೌಚಾಲಯದಲ್ಲಿ ಟವಲ್ ನಿಂದ ಕುತ್ತಿಗೆ ಬಿಗಿದುಕೊಂಡು ಸಾವು ತಂದುಕೊಂಡಿದ್ದಾರೆ.
ತಕ್ಷಣ ಜೈಲು ಸಿಬ್ಬಂದಿ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆಗೆ ಸ್ಪಂದಿಸಿಲ್ಲ. ಶನಿವಾರ ನ್ಯಾಯಾಧೀಶರ ಸಮ್ಮುಖದಲ್ಲಿ ಪಂಚೆನಾಮೆ ಶವಪರೀಕ್ಷೆ ನಡೆಸಲಾಯಿತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.