
ಶಿವಮೊಗ್ಗ: ‘ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿ ಸಂಕೇತ್ ಹತ್ಯೆ ಅತ್ಯಂತ ಖಂಡನೀಯವಾಗಿದ್ದು, ಜಾತಿ ಹಾಗೂ ಧರ್ಮವನ್ನು ನೋಡದೆ ತಪ್ಪಿತಸ್ಥರಿಗೆ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು’ ಎಂದು ಆಗ್ರಹಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಶಿವಮೊಗ್ಗ ಘಟಕದಿಂದ ಎಂಆರ್‌ಎಸ್ ವೃತ್ತದಲ್ಲಿ ಪ್ರತಿಭಟನೆ ನಡೆಸಿ ಹೆಚ್ಚುವರಿ ಜಿಲ್ಲಾ ರಕ್ಷಣಾಧಿಕಾರಿಗೆ ಮನವಿ ಸಲ್ಲಿಸಿದರು.
‘ವಿದ್ಯಾರ್ಥಿಗಳಿಗೆ ಸುಲಭವಾಗಿ ಸರಬರಾಜು ಆಗುತ್ತಿರುವ ಡ್ರಗ್ಸ್ ಹಾಗೂ ಗಾಂಜಾ ಪದಾರ್ಥಗಳೇ ಈ ಹಿಂಸಾತ್ಮಕ ಕೃತ್ಯ ನಡೆಯಲು ಕಾರಣ. ಗೃಹ ಇಲಾಖೆ ಹಾಗೂ ಪೊಲೀಸ್ ಇಲಾಖೆ ರಾಜ್ಯದಲ್ಲಿ ಡ್ರಗ್ಸ್ ಜಾಲವನ್ನು ಭೇದಿಸಲು ವಿಫಲವಾಗಿವೆ. ಡ್ರಗ್ಸ್ ಹಾಗೂ ಗಾಂಜಾ ಜಾಲವನ್ನು ಭೇದಿಸಲು ಪೊಲೀಸರು ಆದ್ಯತೆ ನೀಡಿ, ಸೂಕ್ತ ಕಾರ್ಯಾಚರಣೆ ನಡೆಸಬೇಕು’ ಎಂದು ಆಗ್ರಹಿಸಿದರು.
‘ಈ ಪ್ರಕರಣ ನಂತರ ಪೋಷಕರು ಹಾಗೂ ವಿದ್ಯಾರ್ಥಿಗಳು ಭಯದ ವಾತಾವರಣದಲ್ಲಿ ಇದ್ದಾರೆ. ವಿದ್ಯಾಸಂಸ್ಥೆಗಳಲ್ಲಿ ಶಿಕ್ಷಣಕ್ಕೆ ಬೇಕಾದ ಪೂರಕ ವಾತಾವರಣ ಇಲ್ಲದಂತಾಗಿದೆ’ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಎಬಿವಿಪಿ ಪದಾಧಿಕಾರಿಗಳಾದ ಆದಿತ್ಯಶೆಟ್ಟಿ, ನಂದನ್, ರವಿ ಇರೋಜ, ವಿನಯ್, ಅಭಿಷೇಕ್ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.