ಶಿವಮೊಗ್ಗ: ಗದಗ ಜಿಲ್ಲೆಯ ಜಂಟಿ ಕೃಷಿ ನಿರ್ದೇಶಕ ರುದ್ರೇಶಪ್ಪ ಅವರ ಚಾಲುಕ್ಯ ನಗರದ ಮನೆಯ ಮೇಲೆ ಬುಧವಾರ ದಾಳಿ ನಡೆಸಿದ ಎಸಿಬಿ ಪೊಲೀಸರು ಚಿನ್ನಾಭರಣ, ನಗದು ವಶಕ್ಕೆ ಪಡೆದಿದ್ದಾರೆ.
ದಾಳಿಯ ಸಮಯದಲ್ಲಿ ಮನೆಯಲ್ಲಿ ₹ 3.5 ಕೋಟಿ ಮೌಲ್ಯದ 7 ಕೆ.ಜಿ.ಚಿನ್ನಾಭರಣ, ₹ 2 ಲಕ್ಷ ಮೌಲ್ಯದ 3 ಕೆ.ಜಿ.ಬೆಳ್ಳಿ, ₹ 15 ಲಕ್ಷ ನಗದು ದೊರೆತಿದೆ. ವಜ್ರದ ಆಭರಣಗಳ ಮೌಲ್ಯಮಾಪನ ನಡೆದಿದೆ. ಗೋಪಾಳದಲ್ಲಿನ ಮತ್ತೊಂದು ಮನೆಗೆ ಧಿಕಾರಿಗಳು ತೆರಳಿದರೂ, ಬೀಗ ಹಾಕಿದ್ದ ಕಾರಣ ಪರಿಶೀಲನೆ ನಡೆಸಲು ಸಾಧ್ಯವಾಗಲಿಲ್ಲ.
ಎಸಿಬಿ ಎಸ್‌ಪಿ ಜಯಪ್ರಕಾಶ್ ನೇತೃತ್ವದಲ್ಲಿ 30ಕ್ಕೂ ಹೆಚ್ಚು ಅಧಿಕಾರಿಗಳು ಮತ್ತು ಸಿಬ್ಬಂದಿ ಪರಿಶೀಲನಾ ಕಾರ್ಯ ನಡೆಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.