ADVERTISEMENT

ಆಗುಂಬೆ ಘಾಟಿಯಲ್ಲಿ ಅಪಘಾತ: ಯುವಕ ಸಾವು, ಯುವತಿ ಸ್ಥಿತಿ ಗಂಭೀರ

​ಪ್ರಜಾವಾಣಿ ವಾರ್ತೆ
Published 18 ಜೂನ್ 2023, 16:01 IST
Last Updated 18 ಜೂನ್ 2023, 16:01 IST
   

ಶಿವಮೊಗ್ಗ: ಆಗುಂಬೆ ಘಾಟಿಯಲ್ಲಿ ಭಾನುವಾರ ಬಸ್ ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿದೆ. ಬೈಕ್‌ ಸವಾರ ಸ್ಥಳದಲ್ಲಿಯೇ ಸಾವಿಗೀಡಾಗಿದ್ದು, ಹಿಂಬದಿ ಕುಳಿತಿದ್ದ ಯುವತಿ ಗಂಭೀರವಾಗಿ ಗಾಯಗೊಂಡಿದ್ದಾರೆ.

ಆಗುಂಬೆ ಘಾಟಿಯ 12ನೇ ತಿರುವಿನಲ್ಲಿ ಈ ಅಪಘಾತ ನಡೆದಿದೆ. ಉಡುಪಿ ಜಿಲ್ಲೆ ಬಾರ್ಕೂರಿನ ಶಶಾಂಕ್ ಮೃತಪಟ್ಟವರು. ಹಿಂಬದಿ ಕುಳಿತಿದ್ದ ಸಂಬಂಧಿ ನಿರ್ಮಿತಾ ಗಂಭೀರವಾಗಿ ಗಾಯಗೊಂಡಿದ್ದಾರೆ. ಆಕೆಯನ್ನು ಚಿಕಿತ್ಸೆಗೆ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿದೆ. 

ಶಿವಮೊಗ್ಗದಿಂದ ಬಾರ್ಕೂರಿಗೆ ಬೈಕ್‌ನಲ್ಲಿ ಇಬ್ಬರೂ ಹೋಗುತ್ತಿದ್ದರು. ಮಂಗಳೂರಿನಿಂದ ಉಡುಪಿ ಮಾರ್ಗವಾಗಿ ಶಿವಮೊಗ್ಗಕ್ಕೆ ಬರುತ್ತಿದ್ದ ಖಾಸಗಿ ಬಸ್‌ಗೆ ಡಿಕ್ಕಿ ಹೊಡೆದಿದ್ದಾರೆ. ಈ ಸಂಬಂಧ ಉಡುಪಿಯ ಹೆಬ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.