ADVERTISEMENT

ಶಿವಮೊಗ್ಗ | ಕಾಲಿಗೆ ಗುಂಡು ಹೊಡೆದು ಆರೋಪಿ ಬಂಧನ

​ಪ್ರಜಾವಾಣಿ ವಾರ್ತೆ
Published 13 ಮೇ 2024, 16:20 IST
Last Updated 13 ಮೇ 2024, 16:20 IST

ಶಿವಮೊಗ್ಗ: ಗ್ಯಾಂಗ್‌ ವಾರ್‌ ಪ್ರಕರಣದಡಿ ಆರೋಪಿಯನ್ನು ಬಂಧಿಸಲು ಹೋದಾಗ ಪರಾರಿಯಾಗಲು ಯತ್ನಿಸಿದ ವ್ಯಕ್ತಿಯ ಕಾಲಿಗೆ ಗುಂಡು ಹೊಡೆದು ಪೊಲೀಸರು ಸೋಮವಾರ ಬಂಧಿಸಿದ್ದಾರೆ. 

ಶೋಯಬ್‌ ಬಂಧಿತ ಆರೋಪಿ. ತಾಲ್ಲೂಕಿನ ಬೀರನಕೆರೆಯ ಮನೆಯೊಂದರಲ್ಲಿ ಇದ್ದ ಆರೋಪಿಯನ್ನು ಖಚಿತ ಮಾಹಿತಿ ಮೇರೆಗೆ ಗ್ರಾಮೀಣ ಠಾಣೆ ಪಿಎಸ್‌ಐ ಕುಮಾರ್ ನೇತೃತ್ವದಲ್ಲಿ ಪೊಲೀಸರ ತಂಡ ಗ್ರಾಮಕ್ಕೆ ಧಾವಿಸಿ ಬಂಧಿಸಲು ಮುಂದಾಗಿದೆ. ಆಗ ಆರೋಪಿಯು ಪೊಲೀಸರ ಮೇಲೆ ಹಲ್ಲೆ ಮಾಡಿ ಪರಾರಿಯಾಗಲು ಯತ್ನಿಸಿದ್ದಾನೆ. ಇದರಿಂದಾಗಿ ಆತ್ಮ ರಕ್ಷಣೆ ಮಾಡಿಕೊಳ್ಳಲು ಪೊಲೀಸರು ಆರೋಪಿಯ ಕಾಲಿಗೆ ಗುಂಡು ಹೊಡೆದು ಬಂಧಿಸಿದ್ದಾರೆ. 

ಶಿವಮೊಗ್ಗ ನಗರದ ಲಷ್ಕರ್‌ ಮೊಹಲ್ಲಾದಲ್ಲಿ ಈಚೆಗೆ ಗ್ಯಾಂಗ್‌ ವಾರ್‌ ನಡೆದಿತ್ತು. ಈ ಘಟನೆಯಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಮೂವರು ಮೃತಪಟ್ಟಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಶೋಯಬ್‌ ಪ್ರಮುಖ ಆರೋಪಿಯಾಗಿದ್ದಾನೆ ಎಂದು ತಿಳಿದುಬಂದಿದೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.