ADVERTISEMENT

ಶಿವಮೊಗ್ಗ | ವೇಶ್ಯಾವಾಟಿಕೆ ಆರೋಪ; ಸ್ಪಾ ಮೇಲೆ ದಾಳಿ

​ಪ್ರಜಾವಾಣಿ ವಾರ್ತೆ
Published 20 ಆಗಸ್ಟ್ 2024, 16:14 IST
Last Updated 20 ಆಗಸ್ಟ್ 2024, 16:14 IST

ಶಿವಮೊಗ್ಗ: ಇಲ್ಲಿನ ವೀರಣ್ಣ ಲೇಔಟ್ 3ನೇ ಕ್ರಾಸ್‌ನಲ್ಲಿರುವ ಲೈರಾ ಮೇಕ್ ಓವರ್ ಸ್ಟುಡಿಯೊ ಸಲೂನ್ ಮತ್ತು ಸ್ಪಾನಲ್ಲಿ ವೇಶ್ಯಾವಾಟಿಕೆ ನಡೆಸುತ್ತಿರುವ ಆರೋಪದ ಮೇಲೆ ಸೋಮವಾರ ಸಂಜೆ ವಿನೋಬ ನಗರ ಠಾಣೆ ಪೊಲೀಸರು ದಾಳಿ ನಡೆಸಿದ್ದಾರೆ.

ಖಚಿತ ಮಾಹಿತಿಯ ಮೇರೆಗೆ ವಿನೋಬನಗರ ಪೊಲೀಸ್ ಠಾಣೆ ಇನ್‌ಸ್ಪೆಕ್ಟರ್‌ ಚಂದ್ರಕಲಾ ಮತ್ತು ಮಹಿಳಾ ಠಾಣೆ ಇನ್‌ಸ್ಪೆಕ್ಟರ್‌ ಭರತ್ ಕುಮಾರ್ ನೇತೃತ್ವದಲ್ಲಿ ಪೊಲೀಸರು ದಾಳಿ ನಡೆಸಿ ಇಬ್ಬರು ಸಂತ್ರಸ್ತ ಮಹಿಳೆಯರನ್ನು ರಕ್ಷಣೆ ಮಾಡಿದ್ದಾರೆ.

ವೇಶ್ಯಾವಾಟಿಕೆ ನಡೆಸುತ್ತಿದ್ದ ಆರೋಪದ ಮೇಲೆ ಸ್ಪಾ ಮಾಲೀಕರಾದ ಮಿಳಘಟ್ಟದ ಸೌಮ್ಯ ಪ್ರಭು (33) ಅವರನ್ನು ಬಂಧಿಸಿ ಪ್ರಕರಣ ದಾಖಲಿಸಲಾಗಿದೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.