ADVERTISEMENT

ಸಿಬ್ಬಂದಿ ಶೋಷಿಸುವ ಗುತ್ತಿಗೆ ಸಂಸ್ಥೆ ವಿರುದ್ಧ ಕ್ರಮ: ಈಶ್ವರಪ್ಪ ಎಚ್ಚರಿಕೆ

ಜಿಲ್ಲಾ ಉಸ್ತುವಾರಿ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಎಚ್ಚರಿಕೆ

​ಪ್ರಜಾವಾಣಿ ವಾರ್ತೆ
Published 1 ಅಕ್ಟೋಬರ್ 2020, 15:12 IST
Last Updated 1 ಅಕ್ಟೋಬರ್ 2020, 15:12 IST
ಶಿವಮೊಗ್ಗ ಮೆಗ್ಗಾನ್ ಆಸ್ಪತ್ರೆ ಹೊರಗುತ್ತಿಗೆ ಸಿಬ್ಬಂದಿ ಜತೆ ಗುರುವಾರ ಸಚಿವ ಕೆ.ಎಸ್.ಈಶ್ವರಪ್ಪ ಚರ್ಚಿಸಿದರು.
ಶಿವಮೊಗ್ಗ ಮೆಗ್ಗಾನ್ ಆಸ್ಪತ್ರೆ ಹೊರಗುತ್ತಿಗೆ ಸಿಬ್ಬಂದಿ ಜತೆ ಗುರುವಾರ ಸಚಿವ ಕೆ.ಎಸ್.ಈಶ್ವರಪ್ಪ ಚರ್ಚಿಸಿದರು.   

ಶಿವಮೊಗ್ಗ: ಸಿಬ್ಬಂದಿ ನೇಮಕಕ್ಕೆ ಹಣ ಪಡೆಯುವ, ಅವರಿಗೆಕಡಿಮೆಗೌರವ ಧನ ನೀಡುವ ಹೊರಗುತ್ತಿಗೆ ಸಂಸ್ಥೆ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸುವಂತೆ ಸೂಚಿಸಲಾಗಿದೆ ಎಂದು ಜಿಲ್ಲಾ ಉಸ್ತುವಾರಿಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪಹೇಳಿದರು.

ಮೆಗ್ಗಾನ್ ಆಸ್ಪತ್ರೆಯಲ್ಲಿ ಗುರುವಾರ ಹಿರಿಯ ಅಧಿಕಾರಿಗಳ ಜತೆ ನಡೆದಸಭೆ ಬಳಿಕ ಅವರು ಮಾತನಾಡಿದರು.

ಹಿಂದಿನ ಹೊರಗುತ್ತಿಗೆ ಸಂಸ್ಥೆ ವಿರುದ್ಧ ಹಲವು ಆರೋಪಗಳಿವೆ.ಹೊಸ ಗುತ್ತಿಗೆ ಸಂಸ್ಥೆಯ ಅಡಿಯಲ್ಲಿ ಈಗಿರುವ ಸಿಬ್ಬಂದಿಗಳನ್ನೇಮತ್ತೆ ಕೆಲಸಕ್ಕೆ ತೆಗೆದುಕೊಳ್ಳಲು ನಿರ್ಧರಿಸಲಾಗಿದೆ. ಹೊಸ ಸಂಸ್ಥೆ ಇಂತಹ ಅಕ್ರಮ ಎಸಗಿದರೆ ಕಠಿಣ ಕ್ರಮಕೈಗೊಳ್ಳಲಾಗುವುದು.ಕೊರೊನಾದಂತಹ ತುರ್ತುಸಮಯದಲ್ಲಿಕರ್ತವ್ಯಕ್ಕೆ ಅಡ್ಡಿಪಡಿಸಿದರೆಕ್ರಮ ಜರುಗಿಸಲಾಗುವುದುಎಂದು ಎಚ್ಚರಿಸಿದರು.

ADVERTISEMENT

ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ9 ದಿನಗಳಿಂದ ಪ್ರತಿಭಟನೆ ನಡೆಸುತ್ತಿದ್ದ ಮೆಗ್ಗಾನ್ ಆಸ್ಪತ್ರೆಯ ಹೊರಗುತ್ತಿಗೆ ಸಿಬ್ಬಂದಿ ಸೇವೆಗೆ ಹಾಜರಾಗಲಿದ್ದಾರೆ.ಮುಷ್ಕರದಲ್ಲಿ ಭಾಗವಹಿಸಿದ ಎಲ್ಲಾ ಸಿಬ್ಬಂದಿಗೂ ಮತ್ತೆ ಕರ್ತವ್ಯಕ್ಕೆ ಹಾಜರಾಗಲು ಅವಕಾಶ ಕಲ್ಪಿಸಲಾಗಿದೆ. ಕೊರೊನಾಸಮಯದಲ್ಲಿಕರ್ತವ್ಯಕ್ಕೆ ಚ್ಯುತಿ ಬಾರದಂತೆ ಪ್ರಾಮಾಣಿಕವಾಗಿ ಕಾರ್ಯ ನಿರ್ವಹಿಸಲು ಸೂಚಿಸಲಾಗಿದೆ ಎಂದರು.

ಪ್ರಸ್ತುತ ಮೆಗ್ಗಾನ್‍ನಲ್ಲಿ100ಕ್ಕೂ ಹೆಚ್ಚು ಭದ್ರತಾ ಸಿಬ್ಬಂದಿ ಕಾರ್ಯನಿರ್ವಹಿಸುತ್ತಿದ್ದಾರೆ.ಮುಂದೆ ಗಋ//ಹ ರಕ್ಷಕ ದಳದ ಮೂಲಕ ನಋಮಕ ಮಾಡಿಕೊಳ್ಳಲಾಗುವುದು. 93 ಶುಶ್ರೂಷಕಿಯರು, 78 ಪ್ರಯೋಗಾಲಯ ಸಹಾಯಕರು, 8 ಮಂದಿ ಫಾರ್ಮಸಿಸ್ಟ್ ಮತ್ತು 183 ಸ್ವಚ್ಛತಾಗಾರರ ಸೇವೆ ಹೊಸ ಗುತ್ತಿಗೆದಾರ ಸಂಸ್ಥೆಅಡಿ ಮುಂದುವರಿಸಬೇಕು. ಎಲ್ಲಾ ಸಿಬ್ಬಂದಿ ಪ್ರಾಮಾಣಿಕವಾಗಿಸೇವೆ ಸಲ್ಲಿಸುವ ಕುರಿತುಖಾತ್ರಿಪಡಿಸಿಕೊಳ್ಳಲಾಗುವುದು ಎಂದು ಮಾಹಿತಿ ನೀಡಿದರು.

ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್, ಹೊರ ಗುತ್ತಿಗೆ ಸಿಬ್ಬಂದಿ ಬೇಡಿಕೆ ಈಡೇರಿಸಲು ಸರ್ಕಾರಪ್ರಯತ್ನಿಸುತ್ತಿದೆ. ಸರ್ಕಾರದ ನಿಯಮದಪ್ರಕಾರ ಹೊರಗುತ್ತಿಗೆದಾರರಿಗೆ ಸೌಲಭ್ಯ ಒದಗಿಸಲಾಗುವುದು. ಸರಿಯಾದ ಸಮಯಕ್ಕೆ ಗೌರವಧನ ಪಾವತಿ ಸೇರಿದಂತೆ ಅಗತ್ಯ ಸೌಲಭ್ಯಗಳನ್ನು ಒದಗಿಸಲು ಗುತ್ತಿಗೆದಾರ ಸಂಸ್ಥೆಗೆ ನಿರ್ದೇಶನ ನೀಡಲಾಗಿದೆ.ಸರ್ಕಾರ ತೆಗೆದುಕೊಳ್ಳುವ ನಿರ್ಧಾರಗಳನ್ನು ಜಿಲ್ಲಾಡಳಿತ ಜಾರಿಗೆ ತರುತ್ತದೆ. ಸಣ್ಣಪುಟ್ಟ ಸಮಸ್ಯೆಗಳಿದ್ದರೆ ನಿರ್ದೇಶಕರ ಗಮನಕ್ಕೆ ತರಬೇಕು ಎಂದರು

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ಎಂ.ಶಾಂತರಾಜು, ವೈದ್ಯಕೀಯ ಕಾಲೇಜು ನಿರ್ದೇಶಕ ಡಾ.ಸಿದ್ದಪ್ಪ, ಮೆಗ್ಗಾನ್ ಬೋಧನಾ ಆಸ್ಪತ್ರೆ ಅಧೀಕ್ಷಕ ಎಸ್‌.ಡಾ.ಶ್ರೀಧರ್, ಜಿಲ್ಲಾ ಸರ್ಜನ್ ಡಾ.ಆರ್.ರಘುನಂದನ್, ಆಡಳಿತ ಮಂಡಳಿ ಸದಸ್ಯರಾದ ದಿವಾಕರ ಶೆಟ್ಟಿ, ಡಾ.ವಾಣಿ ಕೋರಿ, ಡಾ.ಗೌತಮ್ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.