ADVERTISEMENT

ಆದಿಚುಂಚನಗಿರಿ ಶಾಖಾ ಮಠ: ಮಹಾಶಿವರಾತ್ರಿ ವಿಶೇಷ ಪೂಜಾ ಕೈಂಕರ್ಯ

​ಪ್ರಜಾವಾಣಿ ವಾರ್ತೆ
Published 22 ಫೆಬ್ರುವರಿ 2025, 16:04 IST
Last Updated 22 ಫೆಬ್ರುವರಿ 2025, 16:04 IST

ಶಿವಮೊಗ್ಗ: ಮಹಾ ಶಿವರಾತ್ರಿ ಪ್ರಯುಕ್ತ ಶರಾವತಿ ನಗರದ ಆದಿಚುಂಚನಗಿರಿ ಮಹಾ ಸಂಸ್ಥಾನ ಮಠದಲ್ಲಿ ನಗರದ ಎಲ್ಲಾ ಭಜನಾ ಮಂಡಳಿ ಒಕ್ಕೂಟಗಳ ಸಹಯೋಗದಲ್ಲಿ 17ನೇ ವರ್ಷದ ಅಖಂಡ ಭಜನೆ ಕಾರ್ಯಕ್ರಮ ಏರ್ಪಡಿಸಲಾಗಿದೆ.

ಶರಾವತಿ ನಗರದ ಕಾಲಭೈರವೇಶ್ವರ ಸ್ವಾಮಿ ದೇವಾಲಯದಲ್ಲಿ ಫೆ. 26ರ ಬೆಳಿಗ್ಗೆ ದೇವರಿಗೆ ವಿಶೇಷ ಪೂಜೆ, ಸಂಜೆ 6 ಗಂಟೆಗೆ ಜಲಾಭಿಷೇಕ, ಕ್ಷೀರಾಭಿಷೇಕ. ಪಂಚಾಮೃತ ಅಭಿಷೇಕ. ರುದ್ರಾಭಿಷೇಕ ಪೂಜಾ ಕೈಂಕರ್ಯಗಳನ್ನು ಶ್ರೀಮಠದ ವತಿಯಿಂದ ಹಮ್ಮಿಕೊಳ್ಳಲಾಗಿದೆ.

ಗುರುಪುರದ ವೀರಸೋಮೇಶ್ವರಸ್ವಾಮಿ ದೇವಾಲಯದಲ್ಲಿ ಅಂದು ಬೆಳಿಗ್ಗೆ 6.30ಕ್ಕೆ ಪಂಚಾಮೃತ ಅಭಿಷೇಕ, ರುದ್ರಾಭಿಷೇಕ, ವಿಶೇಷ ಪೂಜೆ ಅಲಂಕಾರ, ಜಾಗರಣೆ ಮತ್ತು ಶಿವ ಸಂಕೀರ್ತನೆಗಳನ್ನು, ವಿಶೇಷ ಪೂಜಾ ಕೈಂಕರ್ಯಗಳನ್ನು ನಡೆಸಲಾಗುವುದು ಎಂದು ಪ್ರಕಟಣೆ ತಿಳಿಸಿದೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.