ADVERTISEMENT

ದಮನಿತ ಮಹಿಳೆಯ ಭದ್ರತೆಗೆ ಹಲವು ಯೋಜನೆ

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ಎಂ.ಶಾಂತರಾಜು ಮಾಹಿತಿ

​ಪ್ರಜಾವಾಣಿ ವಾರ್ತೆ
Published 2 ಡಿಸೆಂಬರ್ 2019, 15:57 IST
Last Updated 2 ಡಿಸೆಂಬರ್ 2019, 15:57 IST
ಶಿವಮೊಗ್ಗದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಏಡ್ಸ್ ವಿರುದ್ಧ ಜಾಗೃತಿ ಅಭಿಯಾನಕ್ಕೆ ಜಿಲ್ಲಾ ಮತ್ತು ಸೆಷೆನ್ಸ್‌ ನ್ಯಾಯಾಧೀಶ ಮಾಸ್ಟರ್ ಆರ್‌.ಕೆ.ಜಿ.ಎಂ.ಎಂ.ಮಹಾಸ್ವಾಮೀಜಿ ಚಾಲನೆ ನೀಡಿದರು.
ಶಿವಮೊಗ್ಗದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಏಡ್ಸ್ ವಿರುದ್ಧ ಜಾಗೃತಿ ಅಭಿಯಾನಕ್ಕೆ ಜಿಲ್ಲಾ ಮತ್ತು ಸೆಷೆನ್ಸ್‌ ನ್ಯಾಯಾಧೀಶ ಮಾಸ್ಟರ್ ಆರ್‌.ಕೆ.ಜಿ.ಎಂ.ಎಂ.ಮಹಾಸ್ವಾಮೀಜಿ ಚಾಲನೆ ನೀಡಿದರು.   

ಶಿವಮೊಗ್ಗ: ದಮನಿತ ಮಹಿಳೆಯರು,ತೃತೀಯ ಲಿಂಗಿಗಳಿಗೆ ಆರ್ಥಿಕ, ಸಾಮಾಜಿಕ ಭದ್ರತೆ ನೀಡುವ ಮೂಲಕ ಅವರ ಜೀವನ ಮಟ್ಟ ಸುಧಾರಿಸಲು ಹಲವುಯೋಜನೆರೂಪಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ಎಂ.ಶಾಂತರಾಜು ಹೇಳಿದರು.

ಐಎಂಎ ಹಾಲ್‍ನಲ್ಲಿ ಸೋಮವಾರಜಿಲ್ಲಾಡಳಿತ, ಜಿಲ್ಲಾ ಪೊಲೀಸ್ ಇಲಾಖೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಏಡ್ಸ್ ತಡೆಗಟ್ಟುವ ಮತ್ತು ನಿಯಂತ್ರಣ ಘಟಕ, ಕಾನೂನು ಸೇವಾ ಪ್ರಾಧಿಕಾರ ಆಯೋಜಿಸಿದ್ದ ಕಾನೂನು ಅರಿವು,ವಿಶ್ವ ಏಡ್ಸ್‌ ದಿನಾಚರಣೆ, ದಮನಿತ ಮಹಿಳೆಯರಿಗೆ ಇರುವಸರ್ಕಾರದ ಸೌಲಭ್ಯಗಳ ಅರಿವು ಕಾರ್ಯಾಗಾರಉದ್ಘಾಟಿಸಿ ಅವರು ಮಾತನಾಡಿದರು.

ದಮನಿತ ಮಹಿಳೆಯರು ನೆಮ್ಮದಿಯ ಬದುಕುನಡೆಸಲುಪ್ರೋತ್ಸಾಹ ಧನ, ಸ್ವಯಂ ಉದ್ಯೋಗಕ್ಕಾಗಿ ಸಾಲ ಸೌಲಭ್ಯ, ವಸತಿ ಸೌಲಭ್ಯ ಸೇರಿದಂತೆ ಹಲವಾರು ಸವಲತ್ತು ನೀಡಲಾಗುತ್ತಿದೆ. ಕಾನೂನು ನೆರವೂ ಒದಗಿಸಲಾಗುವುದು. ಅವರ ಹಕ್ಕುಗಳ ರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿ ಎಂದರು.

ADVERTISEMENT

ಕರ್ನಾಟಕ ಲೈಂಗಿಕ ಅಲ್ಪಸಂಖ್ಯಾತರ ವೇದಿಕೆ ಕಾರ್ಯದರ್ಶಿ ಕೆ.ಸಿ.ಅಕ್ಷತಾ,ದಮನಿತ ಮಹಿಳೆಯರಿಗೆ, ಲೈಂಗಿಕ ಅಲ್ಪಸಂಖ್ಯಾತರಿಗೆ ಸ್ವಯಂ ಉದ್ಯೋಗ ಕೈಗೊಳ್ಳಲು ₨ 25 ಸಾವಿರ ಸಹಾಯ ಧನ, ₨ 25 ಸಾವಿರ ಬಡ್ಡಿರಹಿತ ಸಾಲ ಸೌಲಭ್ಯ ಒದಗಿಸಲಾಗುತ್ತಿದೆ ಎಂದುಮಾಹಿತಿ ನೀಡಿದರು.

ಹಿರಿಯ ಸಿವಿಲ್ ನ್ಯಾಯಾಧೀಶರಾದ ಕೆ.ಎನ್‌.ಸರಸ್ವತಿ, ವಕೀಲ ಡಿ.ಎನ್.ಹಾಲಸಿದ್ದಪ್ಪ ಉಪಸ್ಥಿತರಿದ್ದರು.

ಕಾರ್ಯಕ್ರಮಕ್ಕೂ ಮೊದಲು ಜಿಲ್ಲಾ ನ್ಯಾಯಾಲಯ ಸಂಕೀರ್ಣದಿಂದ ಐಎಂಎ ಹಾಲ್‌ವರೆಗೆ ಏಡ್ಸ್‌ ಜಾಗೃತಿ ಅಭಿಯಾನ ಹಮ್ಮಿಕೊಳ್ಳಲಾಗಿತ್ತು. ಜಿಲ್ಲಾ ಮತ್ತು ಸೆಷೆನ್ಸ್ ನ್ಯಾಯಾಧೀಶ ಮಾಸ್ಟರ್ ಆರ್‌.ಕೆ.ಜಿ.ಎಂ.ಎಂ.ಮಹಾಸ್ವಾಮೀಜಿ,ಮೆಗ್ಗಾನ್‌ ಆಸ್ಪತ್ರೆ ಜಿಲ್ಲಾ ಸರ್ಜನ್ ಡಾ.ರಘುನಂದನ್ ಜಾಥಾಕ್ಕೆ ಚಾಲನೆ ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.