ADVERTISEMENT

ಪಂಜಾಬ್‌ನ ಅಜಿತ್ ಕೌರ್, ಗುರುಬಚನ್ ಸಿಂಗ್ ಭುಲ್ಲರ್‌ಗೆ ಕುವೆಂಪು ಪುರಸ್ಕಾರ

ಕುವೆಂಪು ರಾಷ್ಟ್ರೀಯ ಪುರಸ್ಕಾರ -2019 ಪ್ರಕಟ

​ಪ್ರಜಾವಾಣಿ ವಾರ್ತೆ
Published 18 ನವೆಂಬರ್ 2019, 19:45 IST
Last Updated 18 ನವೆಂಬರ್ 2019, 19:45 IST
ಅಜೀತ್ ಕೌರ್ 
ಅಜೀತ್ ಕೌರ್    

ತೀರ್ಥಹಳ್ಳಿ (ಶಿವಮೊಗ್ಗ): ಪಂಜಾಬಿನ ಹೆಸರಾಂತ ಸಾಹಿತಿಗಳಾದ ಅಜಿತ್‌ ಕೌರ್‌ ಮತ್ತುಗುರುಬಚನ್ ಸಿಂಗ್ ಭುಲ್ಲರ್ ಅವರನ್ನು ಪ್ರಸಕ್ತ ಸಾಲಿನ ಕುವೆಂಪು ರಾಷ್ಟ್ರೀಯ ಪುರಸ್ಕಾರಕ್ಕೆ ಆಯ್ಕೆ ಮಾಡಲಾಗಿದೆ. ಪ್ರಶಸ್ತಿಯು ₹ 5 ಲಕ್ಷ ಮತ್ತು ಬೆಳ್ಳಿ ಪದಕವನ್ನು ಒಳಗೊಂಡಿರುತ್ತದೆ ಎಂದು ರಾಷ್ಟ್ರಕವಿ ಕುವೆಂಪು ಪ್ರತಿಷ್ಠಾನದ ಸಹ ಕಾರ್ಯದರ್ಶಿ ಕಡಿದಾಳ್ ಪ್ರಕಾಶ್ ತಿಳಿಸಿದ್ದಾರೆ.

ಕುವೆಂಪು ಪ್ರತಿಷ್ಠಾನದ ಅಧ್ಯಕ್ಷ ನಾಡೋಜ ಪ್ರೊ.ಹಂಪ ನಾಗರಾಜಯ್ಯ ಅವರ ಅಧ್ಯಕ್ಷತೆಯಲ್ಲಿ ಬೆಂಗಳೂರಿನಲ್ಲಿ ಕಳೆದ 16ರಂದು ನಡೆದ ಕುವೆಂಪು ರಾಷ್ಟ್ರೀಯ ಪುರಸ್ಕಾರ ಆಯ್ಕೆ ಸಮಿತಿ ಸಭೆಯಲ್ಲಿ ಈ ಇಬ್ಬರೂ ಸಾಹಿತಿಗಳನ್ನು ಆಯ್ಕೆ ಮಾಡಲಾಯಿತು ಎಂದು ಅವರು ಮಾಹಿತಿ ನೀಡಿದ್ದಾರೆ.

ಕುವೆಂಪು ಅವರ ಜನ್ಮದಿನೋತ್ಸವದಂದು ಡಿಸೆಂಬರ್‌ 29) ಕುಪ್ಪಳಿಯಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ತಿಳಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.