ADVERTISEMENT

ಸಕಾಲಕ್ಕೆ ಸಿಗದ ಆಂಬುಲೆನ್ಸ್‌: ಮಣಕನಮಠದ ವ್ಯಕ್ತಿ ಸಾವು

​ಪ್ರಜಾವಾಣಿ ವಾರ್ತೆ
Published 13 ಏಪ್ರಿಲ್ 2022, 4:45 IST
Last Updated 13 ಏಪ್ರಿಲ್ 2022, 4:45 IST
ತುಮರಿ ಆರೋಗ್ಯ ಕೇಂದ್ರಕ್ಕೆ ತಾತ್ಕಾಲಿಕವಾಗಿ ಬಂದಿರುವ ವೆಂಟಿಲೇಟರ್ ಇರುವ ಆಂಬುಲೆನ್ಸ್‌
ತುಮರಿ ಆರೋಗ್ಯ ಕೇಂದ್ರಕ್ಕೆ ತಾತ್ಕಾಲಿಕವಾಗಿ ಬಂದಿರುವ ವೆಂಟಿಲೇಟರ್ ಇರುವ ಆಂಬುಲೆನ್ಸ್‌   

ತುಮರಿ: ಆಂಬುಲೆನ್ಸ್‌ ಸಕಾಲಕ್ಕೆ ಸಿಗದಿರುವುದರಿಂದ ಬೇರಾಳ ಸಮೀಪದ ಮಣಕನಮಠದ ಡಾಕಪ್ಪ ಜೈನ್ (55) ಮೃತಪಟ್ಟಿದ್ದಾರೆ.

ಡಾಕಪ್ಪ ಜೈನ್ ಅವರಿಗೆ ಹೃದಯಾಘಾತವಾಗಿತ್ತು. ತಕ್ಷಣ ಅವರನ್ನು ಆಸ್ಪತ್ರೆಗೆ ಸಾಗಿಸಲು ಆಂಬುಲೆನ್ಸ್‌ ಸಿಗಲಿಲ್ಲ. ಹೊಸನಗರದ ನಗರ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ನೀಡಲಾಗಿದ್ದ ಆಂಬುಲೆನ್ಸ್‌ 3 ಗಂಟೆ ತಡವಾಗಿ ಬಂತು. ಅಷ್ಟು ಹೊತ್ತಿಗೆ ಡಾಕಪ್ಪ ಜೈನ್ ನಿಧನರಾಗಿದ್ದರು.

ಇಲ್ಲಿನ ದ್ವೀಪದ ತುಮರಿ ಪ್ರಾಥಮಿಕ ಆರೋಗ್ಯ ಘಟಕಕ್ಕೆ ನೀಡಲಾಗಿದ್ದ ಆಂಬುಲೆನ್ಸ್‌ಗೆ ಎರಡು ದಿನಗಳ ಹಿಂದೆ ಚಾಲನೆ ನೀಡಲಾಗಿದ್ದು, ಸೋಮವಾರ ಅಪಘಾತವಾಗಿದ್ದರಿಂದ ರಿಪೇರಿ ಮಾಡಿಸಲೆಂದು ಅದನ್ನು ಕಳುಹಿಸಲಾಗಿತ್ತು.

ADVERTISEMENT

ಧ್ವೀಪದ ತುಮರಿ ಬ್ಯಾಕೋಡಿನಲ್ಲಿ ಪುನಃ ಆಂಬುಲೆನ್ಸ್‌ ಸೇವೆಯಲ್ಲಿ ಅವ್ಯವಸ್ಥೆ ಉಂಟಾಗಿರುವ ಬಗ್ಗೆ ಜನ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪದೇ ಪದೇ ಇಂತಹ ಘಟನೆಗಳು ಮರುಕಳಿಸುತ್ತಿವೆ ಎಂದು ಆರೋಪಿಸಿದ್ದಾರೆ.

ತುಮರಿ ಆರೋಗ್ಯ ಕೇಂದ್ರಕ್ಕೆ ಇದೀಗ ತಾತ್ಕಾಲಿಕವಾಗಿ ವೆಂಟಿಲೇಟರ್ ಇರುವ ಆಂಬುಲೆನ್ಸ್‌ ನೀಡಲಾಗಿದೆ.

Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.