ADVERTISEMENT

ಶಿವಮೊಗ್ಗದ ಶಾಂತಿ, ಸಮಾನತೆಗಾಗಿ ಮಾಜಿ ಸೈನಿಕನ ಏಕಾಂಗಿ ಪಾದಯಾತ್ರೆ

​ಪ್ರಜಾವಾಣಿ ವಾರ್ತೆ
Published 19 ಆಗಸ್ಟ್ 2022, 5:05 IST
Last Updated 19 ಆಗಸ್ಟ್ 2022, 5:05 IST
ಗಡಿ ಭದ್ರತಾ ಪಡೆಯ ಮಾಜಿ ಸೈನಿಕ ಎಸ್.ಮಂಜುನಾಥ್ ಏಕಾಂಗಿಯಾಗಿ ಗುರುವಾರ ಶಿವಮೊಗ್ಗ ನಗರ ಬಸ್ ನಿಲ್ದಾಣದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಪಾದಯಾತ್ರೆ ನಡೆಸಿದರು. ನಂತರ ಡಿಸಿ ಕಚೇರಿಗೆ ಮನವಿ ಸಲ್ಲಿಸಿದರು.
ಗಡಿ ಭದ್ರತಾ ಪಡೆಯ ಮಾಜಿ ಸೈನಿಕ ಎಸ್.ಮಂಜುನಾಥ್ ಏಕಾಂಗಿಯಾಗಿ ಗುರುವಾರ ಶಿವಮೊಗ್ಗ ನಗರ ಬಸ್ ನಿಲ್ದಾಣದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಪಾದಯಾತ್ರೆ ನಡೆಸಿದರು. ನಂತರ ಡಿಸಿ ಕಚೇರಿಗೆ ಮನವಿ ಸಲ್ಲಿಸಿದರು.   

ಶಿವಮೊಗ್ಗ: ಜಿಲ್ಲೆಯಲ್ಲಿ ಶಾಂತಿ, ಸಮಾನತೆ ಕಾಪಾಡಬೇಕು. ರಾಷ್ಟ್ರಕ್ಕೆ ಅವಮಾನವಾಗುವಂತಹ ಯಾವುದೇ ಕೃತ್ಯಗಳು ನಡೆಯದಂತೆ ಸೂಕ್ತ ಕಾನೂನು ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿ ಗಡಿ ಭದ್ರತಾ ಪಡೆಯ ಮಾಜಿ ಸೈನಿಕ ಎಸ್.ಮಂಜುನಾಥ್ ಗುರುವಾರಏಕಾಂಗಿಯಾಗಿ ನಗರ ಬಸ್ ನಿಲ್ದಾಣದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಪಾದಯಾತ್ರೆ
ನಡೆಸಿದರು. ನಂತರ ಡಿಸಿಗೆ ಮನವಿ ಸಲ್ಲಿಸಿದರು.

ಸ್ವಾತಂತ್ರ್ಯ ದಿನಾಚರಣೆಯ ಅಮೃತ ಮಹೋತ್ಸವದ ಸಂದರ್ಭದಲ್ಲಿ ನಗರದಲ್ಲಿ ನಡೆದ ಘಟನೆ ದೊಡ್ಡ ಕಪ್ಪುಚುಕ್ಕೆಯಾಗಿದೆ. ಕೆಲ ಸಮಾಜಘಾತಕ ಶಕ್ತಿಗಳು ಸ್ವಾತಂತ್ರ್ಯ ಹೋರಾಟಗಾರರ ನಿಂದಿಸುವುದು, ಅವಾಚ್ಯ ಶಬ್ದಗಳ ಬಳಕೆ ಮತ್ತು ಅವರ ಭಾವಚಿತ್ರ ಅವಮಾನಿಸುವುದು ರಾಷ್ಟ್ರದ್ರೋಹಕ್ಕೆ ಸಮಾನವಾಗಿದೆ ಎಂದಿದ್ದಾರೆ.

ರಾಷ್ಟ್ರಕ್ಕಾಗಿ ತಮ್ಮ ಜೀವನ ಅರ್ಪಿಸಿರುವ ಹಾಗೂ ಜಾತಿ, ಧರ್ಮ, ಭೇದ ಭಾವ ಮರೆತು ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಹೋರಾಟಗಾರರಿಗೆ ಮತ್ತು ಯೋಧರಿಗೆ ಅವಮಾನ ಮಾಡುವುದನ್ನು ನಿಲ್ಲಿಸಬೇಕು. ಅಂತಹವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಮನವಿಯಲ್ಲಿ ಒತ್ತಾಯಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.