ADVERTISEMENT

ಅಂಜನಾಪುರ ಜಲಾಶಯ ವೀಕ್ಷಿಸಲು ಪ್ರವಾಸಿಗರ ದಂಡು

​ಪ್ರಜಾವಾಣಿ ವಾರ್ತೆ
Published 11 ಜುಲೈ 2022, 2:34 IST
Last Updated 11 ಜುಲೈ 2022, 2:34 IST
ಶಿಕಾರಿಪುರ ತಾಲ್ಲೂಕಿನ ಅಂಜನಾಪುರ ಜಲಾಶಯ ಭಾನುವಾರ ಭರ್ತಿಯಾಗಿ ಕೋಡಿ ಮೇಲೆ ನೀರು ಹರಿಯುತ್ತಿದ್ದ ದೃಶ್ಯ.           ಚಿತ್ರ: ಎಚ್.ಎಸ್. ರಘು
ಶಿಕಾರಿಪುರ ತಾಲ್ಲೂಕಿನ ಅಂಜನಾಪುರ ಜಲಾಶಯ ಭಾನುವಾರ ಭರ್ತಿಯಾಗಿ ಕೋಡಿ ಮೇಲೆ ನೀರು ಹರಿಯುತ್ತಿದ್ದ ದೃಶ್ಯ.           ಚಿತ್ರ: ಎಚ್.ಎಸ್. ರಘು   

ಶಿಕಾರಿಪುರ: ತಾಲ್ಲೂಕಿನ ಅಂಜನಾಪುರ ಜಲಾಶಯದ ಸೌಂದರ್ಯ ವೀಕ್ಷಿಸಲು ಭಾನುವಾರ ಸಾವಿರಾರು ಸಂಖ್ಯೆಯಲ್ಲಿ ಪ್ರವಾಸಿರು ಭೇಟಿ ನೀಡಿದರು.

ಶಿಕಾರಿಪುರ ಪಟ್ಟಣದಿಂದ 18 ಕಿ.ಮೀ. ದೂರದಲ್ಲಿರುವ ತಾಲ್ಲೂಕಿನ ರೈತರ ಸಾವಿರಾರು ಹೆಕ್ಟೇರ್ ಕೃಷಿ ಭೂಮಿಗೆ
ನೀರು ಒದಗಿಸುವ ಹಾಗೂ ಶಿಕಾರಿಪುರ, ಶಿರಾಳಕೊಪ್ಪ ಪಟ್ಟಣಕ್ಕೆ ಕುಡಿಯುವ ನೀರು ಒದಗಿಸುವ ಜಲಾಶಯ ಇದಾಗಿದೆ.

ಭಾನುವಾರ ರಜಾ ದಿನವಾದ್ದರಿಂದ ಸಾವಿರಾರು ಸಂಖ್ಯೆಯಲ್ಲಿ ಪ್ರವಾಸಿಗರು ಭೇಟಿ ನೀಡಿ ಜಲಾಶಯದ ಸೌಂದರ್ಯವನ್ನು ಕಣ್ತುಂಬಿಕೊಂಡರು. ಜಲಾಶಯ ಮುಂಭಾಗವಿರುವ ಜಲಾಶಯ ಉದ್ಯಾನವನ್ನು ವೀಕ್ಷಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.