ADVERTISEMENT

ಶಿವಮೊಗ್ಗ: ಆದಿಚುಂಚನಗಿರಿ ಶಾಖಾ ಮಠದ ವಾರ್ಷಿಕೋತ್ಸವ ನ.4ಕ್ಕೆ

​ಪ್ರಜಾವಾಣಿ ವಾರ್ತೆ
Published 2 ನವೆಂಬರ್ 2023, 15:41 IST
Last Updated 2 ನವೆಂಬರ್ 2023, 15:41 IST
ಪ್ರಸನ್ನನಾಥ ಸ್ವಾಮೀಜಿ
ಪ್ರಸನ್ನನಾಥ ಸ್ವಾಮೀಜಿ   

ಶಿವಮೊಗ್ಗ: ಆದಿಚುಂಚನಗಿರಿ ಶಾಖಾ ಮಠದ 33ನೇ ವಾರ್ಷಿಕೋತ್ಸವ ನವೆಂಬರ್ 4ರಂದು ಶರಾವತಿ ನಗರದ ಆದಿಚುಂಚನಗಿರಿ ಕ್ರೀಡಾಂಗಣದಲ್ಲಿ ನಡೆಯಲಿದೆ. ನ.6 ರಂದು ಉಪನ್ಯಾಸ ಮಾಲೆ, ಸಾಧಕರಿಗೆ ಸನ್ಮಾನ ಕಾರ್ಯಕ್ರಮ ನಡೆಯಲಿದೆ.

ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಜಗದ್ಗುರು ನಿರ್ಮಲಾನಂದನಾಥ ಸ್ವಾಮೀಜಿ ಸಾನಿಧ್ಯದಲ್ಲಿ ಮಠದ ಪ್ರಧಾನ ಕಾರ್ಯದರ್ಶಿ ಪ್ರಸನ್ನನಾಥ ಸ್ವಾಮೀಜಿ ಅವರ ಉಪಸ್ಥಿತಿಯಲ್ಲಿ ದಿವ್ಯ ಸತ್ಸಂಗ, ಧರ್ಮ ಸಂಕಥನ ಹಾಗೂ ಸಾಧಕರಿಗೆ ಸನ್ಮಾನ ಸೇರಿದಂತೆ ವಿವಿಧ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

ನವೆಂಬರ್ 4 ರಂದು ಸಂಜೆ 5.30ಕ್ಕೆ ಶರಾವತಿ ನಗರದ ಆದಿಚುಂಚನಗಿರಿ ಶಾಲಾ ಕ್ರೀಡಾಂಗಣದಲ್ಲಿ ಶಾಲಾ - ಕಾಲೇಜಿನ ವಾರ್ಷಿಕೋತ್ಸವ ಸಮಾರಂಭದ ಉದ್ಘಾಟನೆ ನಡೆಯಲಿದೆ. ವಿಶೇಷ ಆಹ್ವಾನಿತರಾಗಿ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ, ಶಾಸಕ ಎಸ್.ಎನ್. ಚನ್ನಬಸಪ್ಪ, ಜಿಲ್ಲಾಧಿಕಾರಿ ಡಾ. ಆರ್.ಸೆಲ್ವಮಣಿ ಭಾಗವಹಿಸಲಿದ್ದಾರೆ. ಅಂದು ಎಸ್ಸೆಸ್ಸೆಲ್ಸಿ  ಮತ್ತು ಪಿಯುಸಿಯಲ್ಲಿ ಉತ್ತಮ ಸಾಧನೆ ಮಾಡಿದವರಿಗೆ, ಕ್ರೀಡಾ ಕ್ಷೇತ್ರದಲ್ಲಿ ರಾಷ್ಟ್ರ ಮತ್ತು ಅಂತರರಾಷ್ಟ್ರೀಯ ಮಟ್ಟದಲ್ಲಿ ಸಾಧನೆ ಮಾಡಿದವರನ್ನು ಗೌರವಿಸಲಾಗುವುದು.

ADVERTISEMENT

ನವೆಂಬರ್ 5 ರಂದು ಬೆಳಿಗ್ಗೆ 7 ಗಂಟೆಗೆ ಶರಾವತಿ ನಗರದ ಕಾಲಭೈರವೇಶ್ವರ ಸ್ವಾಮಿ ದೇವಾಲಯದಲ್ಲಿ ಶ್ರೀಗಳ ಸಾನ್ನಿಧ್ಯದಲ್ಲಿ  ಹೋಮ-ಹವನ ಮತ್ತು ವಿಶೇಷ ಪೂಜಾ ಕೈಂಕರ್ಯ ನಡೆಯಲಿವೆ. ನ.6 ರಂದು ಬೆಳಿಗ್ಗೆ 10 ಗಂಟೆಗೆ ಸನಾತನ ಧರ್ಮ ಅರಿವು ಮತ್ತು ಅನುಸಂಧಾನ ವಿಷಯದ ಕುರಿತು ವಾಗ್ಮಿ ಸೂರ್ಯ ಹೆಬ್ಬಾರ್ ಉಪನ್ಯಾಸ ನೀಡಲಿದ್ದಾರೆ. ಶರಾವತಿ ನಗರದ ಆದಿಚುಂಚನಗಿರಿ ಸಮುದಾಯ ಭವನದಲ್ಲಿ ನಡೆಯಲಿರುವ ಈ ಕಾರ್ಯಕ್ರಮದಲ್ಲಿ ಎಸ್ಪಿ ಜಿ.ಕೆ.ಮಿಥುನ್ ಕುಮಾರ್ ಅತಿಥಿಯಾಗಿ ಪಾಲ್ಗೊಳ್ಳುವರು. ಇದೇ ಸಂದರ್ಭದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕರನ್ನು ಸನ್ಮಾನಿಸುವ ಕಾರ್ಯಕ್ರಮ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.