ADVERTISEMENT

ಕೆಎಫ್‌ಡಿ ನಿರೋಧಕ ಲಸಿಕೆ ಅಭಿಯಾನ

ಸಮೀಪದ ಅರಳಗೋಡು ಗ್ರಾಮ ಪಂಚಾಯಿತಿ ವ್ಯಾಪ್ತಿ

​ಪ್ರಜಾವಾಣಿ ವಾರ್ತೆ
Published 23 ಮೇ 2022, 4:08 IST
Last Updated 23 ಮೇ 2022, 4:08 IST
ಕಾರ್ಗಲ್‌ ಸಮೀಪದ ಅರಳಗೋಡು ಗ್ರಾಮ ಪಂಚಾಯಿತಿಯ ಬಿದರೂರು ಗ್ರಾಮದಲ್ಲಿ ಆರೋಗ್ಯ ಇಲಾಖೆಯ ಕಾರ್ಯಕರ್ತರು ವಾಹನದಲ್ಲಿ ಓಡಾಡಿಕೊಂಡು ಲಸಿಕೆ ಪಡೆಯದಿರುವ ದಾರಿಹೋಕರನ್ನು ಗುರುತಿಸಿ ಲಸಿಕೆ ಹಾಕಿದರು.
ಕಾರ್ಗಲ್‌ ಸಮೀಪದ ಅರಳಗೋಡು ಗ್ರಾಮ ಪಂಚಾಯಿತಿಯ ಬಿದರೂರು ಗ್ರಾಮದಲ್ಲಿ ಆರೋಗ್ಯ ಇಲಾಖೆಯ ಕಾರ್ಯಕರ್ತರು ವಾಹನದಲ್ಲಿ ಓಡಾಡಿಕೊಂಡು ಲಸಿಕೆ ಪಡೆಯದಿರುವ ದಾರಿಹೋಕರನ್ನು ಗುರುತಿಸಿ ಲಸಿಕೆ ಹಾಕಿದರು.   

ಕಾರ್ಗಲ್: ಇಲ್ಲಿಗೆ ಸಮೀಪದ ಅರಳಗೋಡು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಮಂಗನ ಕಾಯಿಲೆ ರೋಗ ನಿರೋಧಕ ಲಸಿಕೆ ಅಭಿಯಾನ ಆರೋಗ್ಯ ಇಲಾಖೆ ವತಿಯಿಂದ ಹಮ್ಮಿಕೊಳ್ಳಲಾಗಿತ್ತು.

ಲಸಿಕೆಯನ್ನು ಪ್ರತಿ ಮನೆ ಮನೆಗೂ ತಲುಪಿಸುವ ಗುರಿಯನ್ನು ಹೊಂದಲಾಗಿತ್ತು. ಈ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆಯ ಕಾರ್ಯಕರ್ತರು ವಾಹನಗಳಲ್ಲಿ ಲಸಿಕೆಗಳೊಂದಿಗೆ ವನ್ಯಜೀವ ಅಭಯಾರಣ್ಯ ಪ್ರದೇಶಗಳಲ್ಲಿ ಸುತ್ತಾಡಿಕೊಂಡು ಲಸಿಕೆ ಪಡೆಯದಿರುವವರನ್ನು ಗುರುತಿಸಿ ಕಡ್ಡಾಯ ಚುಚ್ಚುಮದ್ದನ್ನು ನೀಡುವಲ್ಲಿ ನಿರತರಾಗಿದ್ದರು.

ಶೇಖಡಾ 95ರಷ್ಟು ಈ ಭಾಗದ ನಿವಾಸಿಗಳು ಪ್ರಥಮ ಮತ್ತು ದ್ವಿತೀಯ ಹಂತದ ಲಸಿಕೆಯನ್ನು ಪಡೆದಿದ್ದು, ಬೂಸ್ಟರ್ ಡೋಸ್ ಪಡೆಯಲು ಅರ್ಹತೆ ಇರುವವರಿಗೆ 3ನೇ ಹಂತದಲ್ಲಿ ಚುಚ್ಚುಮದ್ದು ನೀಡಲಾಗುತ್ತಿದೆ ಎಂದು ಅರಳಗೋಡು ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ತಿಳಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.