ADVERTISEMENT

ಎಪಿಎಂಸಿ ‌ದುರ್ಬಲಗೊಳಿಸುವ ಹುನ್ನಾರ: ಕೆ.ಟಿ. ಗಂಗಾಧರ್

ಎಪಿಎಂಸಿ ಕಾಯ್ದೆ ಕುರಿತು ವೆಬಿನಾರ್

​ಪ್ರಜಾವಾಣಿ ವಾರ್ತೆ
Published 30 ನವೆಂಬರ್ 2020, 3:06 IST
Last Updated 30 ನವೆಂಬರ್ 2020, 3:06 IST
ಶಿವಮೊಗ್ಗ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಸಹಯೋಗದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಹೊಸ ಎಪಿಎಂಸಿ ಕಾಯ್ದೆ ಕುರಿತು ವೆಬಿನಾರ್‌ನಲ್ಲಿ ರೈತ ಸಂಘ ಹಾಗೂ ಹಸಿರು ಸೇನೆ ಅಧ್ಯಕ್ಷ ಕೆ.ಟಿ. ಗಂಗಾಧರ್ ಮಾತನಾಡಿದರು
ಶಿವಮೊಗ್ಗ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಸಹಯೋಗದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಹೊಸ ಎಪಿಎಂಸಿ ಕಾಯ್ದೆ ಕುರಿತು ವೆಬಿನಾರ್‌ನಲ್ಲಿ ರೈತ ಸಂಘ ಹಾಗೂ ಹಸಿರು ಸೇನೆ ಅಧ್ಯಕ್ಷ ಕೆ.ಟಿ. ಗಂಗಾಧರ್ ಮಾತನಾಡಿದರು   

ಶಿವಮೊಗ್ಗ: ಎಪಿಎಂಸಿ ಕಾಯ್ದೆ ತಿದ್ದುಪಡಿ ಮೂಲಕ ಕೇಂದ್ರ ಸರ್ಕಾರ ಎಪಿಎಂಸಿ ಮಾರುಕಟ್ಟೆಗಳನ್ನು ದುರ್ಬಲಗೊಳಿಸುವ ಹುನ್ನಾರ ನಡೆಸಿದೆ ಎಂದು ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಅಧ್ಯಕ್ಷ ಕೆ.ಟಿ. ಗಂಗಾಧರ್ ದೂರಿದರು.

ಕರ್ನಾಟಕ ರಾಜ್ಯ ಆರ್ಥಿಕ ಪರಿಷತ್ ಮತ್ತು ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಸಹಯೋಗದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಹೊಸ ಎಪಿಎಂಸಿ ಕಾಯ್ದೆ ಕುರಿತ ವೆಬಿನಾರ್‌ನಲ್ಲಿ ಅವರು ಮಾತನಾಡಿದರು.

ಇಡೀ ದೇಶಕ್ಕೆ ಅನ್ನ ಹಾಕುವ ರೈತನನ್ನು ಭಿಕ್ಷುಕನಂತೆ ಕಾಣಲಾಗುತ್ತಿದೆ. ರೈತರು ಸ್ವಾವಲಂಬಿಗಳು. ಆತ್ಮಾಭಿಮಾನ, ಸ್ವಾಭಿಮಾನದಿಂದ ಬದುಕುತ್ತಿರುವವರು. ಇಂತಹ ರೈತರನ್ನು ಎಪಿಎಂಸಿ ಕಾಯ್ದೆ ತಿದ್ದುಪಡಿ ಮೂಲಕ ಸಂಕಷ್ಟಕ್ಕೆ ಸಿಲುಕಿಸಿ ಬೀದಿಪಾಲು ಮಾಡುವ ಪ್ರಯತ್ನ ನಡೆದಿದೆ. ಈ ಮೂಲಕ ಬಂಡವಾಳ ಶಾಹಿಗಳನ್ನು ಪ್ರೋತ್ಸಾಹಿಸುವ ಕೆಲಸ ನಡೆಯುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ADVERTISEMENT

ಗದಗದ ಮಾಜಿ ಶಾಸಕ ಡಿ.ಆರ್. ಪಾಟೀಲ್, ‘ಎಪಿಎಂಸಿ ಕಾಯ್ದೆಯನ್ನು ಸುಗ್ರೀವಾಜ್ಞೆ ಮೂಲಕ ಜಾರಿಗೆ ತರದೆ ಈ ಬಗ್ಗೆ ಸಂಸತ್ತಿನಲ್ಲಿ ಚರ್ಚೆ ನಡೆಸಿ, ಜಾರಿಗೊಳಿಸಬೇಕಿದೆ’ ಎಂದು ಒತ್ತಾಯಿಸಿದರು.

ಬೆಂಗಳೂರು ಕೃಷಿ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಡಾ. ಪ್ರಕಾಶ್ ಕಮ್ಮರಡಿ, ಶಿವಮೊಗ್ಗ ಎಪಿಎಂಸಿ ಅಧ್ಯಕ್ಷ ಕೆ.ಪಿ. ದುಗ್ಗಪ್ಪಗೌಡ, ರಾಜ್ಯ ಆರ್ಥಿಕ ಪರಿಷತ್ ಅಧ್ಯಕ್ಷ ಡಾ.ಆರ್. ಜಯಶಂಕರ್, ಉಪಾಧ್ಯಕ್ಷ ಡಾ. ನಾರಾಯಣ ರಾವ್, ಕಾರ್ಯಕ್ರಮ ಸಂಯೋಜಕ ಡಿವಿಎಸ್ ಕಾಲೇಜಿನ ಪ್ರಾಧ್ಯಾಪಕ ಡಾ.ಎಂ.ವಿ. ವೆಂಕಟೇಶ್ ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.