ADVERTISEMENT

ಹವಾಮಾನ ಆಧಾರಿತ ಬೆಳೆ ವಿಮೆ ಪರಿಹಾರ ಸಮರ್ಪಕ ವಿತರಣೆಗೆ ಮನವಿ

​ಪ್ರಜಾವಾಣಿ ವಾರ್ತೆ
Published 28 ಫೆಬ್ರುವರಿ 2026, 7:56 IST
Last Updated 28 ಫೆಬ್ರುವರಿ 2026, 7:56 IST
ಸಾಗರದಲ್ಲಿ ಪ್ರಾಂತ್ಯ ಅಡಿಕೆ ಬೆಳೆಗಾರರ ಸಂಘದ ಪ್ರಮುಖರು ಹವಾಮಾನ ಆಧಾರಿತ ಬೆಳೆ ವಿಮೆ ಪರಿಹಾರದ ಸಮರ್ಪಕ ವಿತರಣೆಗೆ ಒತ್ತಾಯಿಸಿ ಶುಕ್ರವಾರ ಉಪವಿಭಾಗಾಧಿಕಾರಿ ಕಚೇರಿಗೆ ಮನವಿ ಸಲ್ಲಿಸಿದರು
ಸಾಗರದಲ್ಲಿ ಪ್ರಾಂತ್ಯ ಅಡಿಕೆ ಬೆಳೆಗಾರರ ಸಂಘದ ಪ್ರಮುಖರು ಹವಾಮಾನ ಆಧಾರಿತ ಬೆಳೆ ವಿಮೆ ಪರಿಹಾರದ ಸಮರ್ಪಕ ವಿತರಣೆಗೆ ಒತ್ತಾಯಿಸಿ ಶುಕ್ರವಾರ ಉಪವಿಭಾಗಾಧಿಕಾರಿ ಕಚೇರಿಗೆ ಮನವಿ ಸಲ್ಲಿಸಿದರು   

ಸಾಗರ: ಹವಾಮಾನ ಆಧಾರಿತ ಬೆಳೆ ವಿಮೆ ಪರಿಹಾರದ ಸಮರ್ಪಕ ವಿತರಣೆಗೆ ಒತ್ತಾಯಿಸಿ ಪ್ರಾಂತ್ಯ ಅಡಿಕೆ ಬೆಳೆಗಾರರ ಸಂಘದ ಪ್ರಮುಖರು ಶುಕ್ರವಾರ ಉಪ ವಿಭಾಗಾಧಿಕಾರಿ ಕಚೇರಿಗೆ ಮನವಿ ಸಲ್ಲಿಸಿದ್ದಾರೆ.

‘2024– 25ನೇ ಸಾಲಿನಲ್ಲಿ ಅಡಿಕೆ ಬೆಳೆಗಾರರಿಗೆ ಅವೈಜ್ಞಾನಿಕ ಮಾದರಿಯಲ್ಲಿ ಬೆಳೆ ವಿಮೆ ಪರಿಹಾರ ವಿತರಿಸಲಾಗಿದೆ. ಇದಕ್ಕೆ ಮಳೆಮಾಪನ ಕೇಂದ್ರಗಳು ಸುಸ್ಥಿತಿಯಲ್ಲಿ ಇಲ್ಲದೇ ಇರುವುದು ಕಾರಣವಾಗಿದೆ. ಈ ಹಂತದಲ್ಲಿ ಎಲ್ಲ ಮಳೆಮಾಪನ ಕೇಂದ್ರಗಳು ಸುಸ್ಥಿತಿಯಲ್ಲಿ ಇರುವಂತೆ ತಾಲ್ಲೂಕು ಆಡಳಿತ ನೋಡಿಕೊಳ್ಳಬೇಕು’ ಎಂದು ಮನವಿಯಲ್ಲಿ ಒತ್ತಾಯಿಸಲಾಗಿದೆ.

ಮಳೆಮಾಪನ ಕೇಂದ್ರಗಳಲ್ಲಿ ಸರಿಯಾದ ರೀತಿಯಲ್ಲಿ ಮಳೆಯ ಪ್ರಮಾಣ ದಾಖಲಾಗುವಂತೆ ಸೂಕ್ತ ಸಿಬ್ಬಂದಿ ನೇಮಕ ಮಾಡಬೇಕು. ಬೆಳೆ ವಿಮೆ ವಿಷಯದಲ್ಲಿ ರೈತರಿಗೆ ಅನ್ಯಾಯವಾಗದಂತೆ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಮನವಿಯಲ್ಲಿ ಆಗ್ರಹಿಸಲಾಗಿದೆ.

ADVERTISEMENT

ಅಡಿಕೆ ಬೆಳೆಗಾರರ ಸಂಘದ ಅಧ್ಯಕ್ಷ ವ.ಶಂ.ರಾಮಚಂದ್ರ ಭಟ್, ಕಾರ್ಯದರ್ಶಿ ರಾಜೇಂದ್ರ ಕೆ.ಎಸ್. ವೆಂಕಟರಾಮ್, ಶೇಷಗಿರಿ, ಕೃಷ್ಣಮೂರ್ತಿ ಹೊಸಬಾಳೆ, ನಾರಾಯಣ ಮೂರ್ತಿ ಕಾನುಗೋಡು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.