ADVERTISEMENT

ಶರಾವತಿ ಸಂತ್ರಸ್ತರ ಪರ ಮೇಲ್ಮನವಿ: ಸುಪ್ರೀಂ ಕೋರ್ಟ್‌ನಲ್ಲಿ ವಿಚಾರಣೆ ಇಂದು

​ಪ್ರಜಾವಾಣಿ ವಾರ್ತೆ
Published 3 ಡಿಸೆಂಬರ್ 2024, 0:20 IST
Last Updated 3 ಡಿಸೆಂಬರ್ 2024, 0:20 IST
<div class="paragraphs"><p>ಸುಪ್ರೀಂ ಕೋರ್ಟ್‌&nbsp;</p></div>

ಸುಪ್ರೀಂ ಕೋರ್ಟ್‌ 

   

ಶಿವಮೊಗ್ಗ: ಶರಾವತಿ ಮುಳುಗಡೆ ಸಂತ್ರಸ್ತರ ಪರ ರಾಜ್ಯ ಸರ್ಕಾರ ಸುಪ್ರೀಂಕೋರ್ಟ್‌ನಲ್ಲಿ ಸಲ್ಲಿಸಿರುವ ದಾವೆಯ ವಿಚಾರಣೆ ಮಂಗಳವಾರ ವಿಚಾರಣೆಗೆ ಬರಲಿದೆ. 

ರಾಜ್ಯ ಸರ್ಕಾರವನ್ನು ಪ್ರತಿನಿಧಿಸುವ ವಕೀಲ ವಿ.ಎನ್‌.ರಘುಪತಿ ಅವರೊಂದಿಗೆ ಹಿರಿಯ ಕಾನೂನು ತಜ್ಞ ದೇವದಾಸ ಕಾಮತ್ ಅವರನ್ನು ಪ್ರಕರಣದಲ್ಲಿ ವಿಶೇಷವಾಗಿ ನಿಯೋಜಿಸಲಾಗಿದೆ. ದೇವದಾಸ ಕಾಮತ್ ಸೋಮವಾರ ಶಿವಮೊಗ್ಗ ಸಿಸಿಎಫ್ ಕೆ.ಟಿ.ಹನುಮಂತಪ್ಪ ಅವರೊಂದಿಗೆ ವಿಡಿಯೊ ಕಾನ್ಫರೆನ್ಸ್ ನಡೆಸಿ ಮಾಹಿತಿ ಪಡೆದರು ಎಂದು ಜಿಲ್ಲಾ ಕಾಂಗ್ರೆಸ್ ವಕ್ತಾರ ರಮೇಶ್ ಹೆಗ್ಡೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 

ADVERTISEMENT

ಸಂತ್ರಸ್ತರು ವಾಸಿಸುತ್ತಿರುವ 9139 ಭೂಮಿಯನ್ನು ಹಿಂದಿನ ಅವಧಿಯಲ್ಲಿ ಅರಣ್ಯ ಇಲಾಖೆಯಿಂದ ಡಿನೋಟಿಫೈ ಮಾಡಿದ್ದ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಹಕ್ಕುಪತ್ರ ನೀಡಿತ್ತು. ಅದನ್ನು ಸುಪ್ರೀಂಕೋರ್ಟ್ ರದ್ದು ಪಡಿಸಿದ್ದು, ಅದರ ವಿರುದ್ಧ ರಾಜ್ಯ ಸರ್ಕಾರ ಮೇಲ್ಮನವಿ ಸಲ್ಲಿಸಿದೆ. ಅರಣ್ಯ ಸಚಿವ ಈಶ್ವರ ಖಂಡ್ರೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಅವರ ಒತ್ತಾಸೆಯ ಫಲವಾಗಿ ಪ್ರಕರಣದ ವಿಚಾರಣೆಯನ್ನು ತುರ್ತಾಗಿ ಕೈಗೆತ್ತಿಕೊಳ್ಳುವಂತೆ ನ್ಯಾಯಾಲಯಕ್ಕೆ ರಾಜ್ಯ ಸರ್ಕಾರ ಕೋರಿತ್ತು ಎಂದು ರಮೇಶ್ ಹೆಗ್ಡೆ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.