ADVERTISEMENT

ಶಿವಮೊಗ್ಗ: ಆರ್ಯವೈಶ್ಯ ಸಮುದಾಯ ಅಭಿವೃದ್ಧಿ ನಿಗಮ: ಅರ್ಜಿ ಆಹ್ವಾನ

-

​ಪ್ರಜಾವಾಣಿ ವಾರ್ತೆ
Published 22 ಜೂನ್ 2025, 13:24 IST
Last Updated 22 ಜೂನ್ 2025, 13:24 IST
<div class="paragraphs"><p>ಅರ್ಜಿ ಆಹ್ವಾನ</p></div>

ಅರ್ಜಿ ಆಹ್ವಾನ

   

ಶಿವಮೊಗ್ಗ: ಕರ್ನಾಟಕ ಆರ್ಯ ವೈಶ್ಯ ಸಮುದಾಯ ಅಭಿವೃದ್ಧಿ ನಿಗಮದಿಂದ 2025-26 ನೇಸಾಲಿಗೆ ಸಾಲ-ಸೌಲಭ್ಯ ಒದಗಿಸಲು ಅರ್ಜಿ ಆಹ್ವಾನಿಸಲಾಗಿದೆ.

ಸ್ವಯಂ ಉದ್ಯೋಗ ನೇರ ಸಾಲ ಯೋಜನೆ, ಬ್ಯಾಂಕ್‌ಗಳ ಸಹಯೋಗದೊಂದಿಗೆ ಆರ್ಯ ವೈಶ್ಯ ಆಹಾರ ವಾಹಿನಿ/ವಾಹಿನಿ ಯೋಜನೆ, ವಾಸತಿ ಜಲಶಕ್ತಿ ಯೋಜನೆ, ಅರಿವು ಶೈಕ್ಷಣಿಕ ಸಾಲ ಯೋಜನೆಗಳಿದ್ದು, ಸಿಇಟಿ, ಎನ್‌ಇಇಟಿ ಕೌನ್ಸೆಲಿಂಗ್ ಮುಗಿದ ನಂತರ ಅರ್ಜಿ ಆಹ್ವಾನಿಸಲಾಗುವುದು.

ADVERTISEMENT

ಅರ್ಜಿ ಸಲ್ಲಿಸುವವರು ಸಾಮಾನ್ಯ ವರ್ಗದಲ್ಲಿ ಆರ್ಯ ವೈಶ್ಯ ಸಮುದಾಯಕ್ಕೆ ಸೇರಿದವರಾಗಿರಬೇಕು. ನಮೂನೆ-ಜಿ ಯಲ್ಲಿ ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಪಡೆದಿರಬೇಕು. ಅರ್ಜಿದಾರರು ಕರ್ನಾಟಕ ರಾಜ್ಯದವರಾಗಿದ್ದು ಅವರ ಕಾಯಂ ವಿಳಾಸವು ರಾಜ್ಯದಲ್ಲಿರಬೇಕು. ಅರ್ಜಿದಾರರ ಮೊಬೈಲ್ ಸಂಖ್ಯೆಯು ಆಧಾರ್ ಸಂಖ್ಯೆಗೆ ಜೋಡಣೆಯಾಗಿರಬೇಕು ಮತ್ತು ಬ್ಯಾಂಕ್ ಖಾತೆಗೆ ಆಧಾರ್ ಸೀಡಿಂಗ್ ಆಗಿರಬೇಕು.

ಅರ್ಹ ಅರ್ಜಿದಾರರನ್ನು ಸಿಇಒ ಅಧ್ಯಕ್ಷತೆಯಲ್ಲಿ ರಚಿಸಿರುವ ಜಿಲ್ಲಾ ಮಟ್ಟದ ಆಯ್ಕೆ ಸಮಿತಿಯ ಮೂಲಕ ಆಯ್ಕೆ ಮಾಡಲಾಗುವುದು. 2019-20ನೇ ಸಾಲಿನಿಂದ 2021-22ನೇ ಸಾಲಿನವರೆಗೆ ಸ್ವಯಂ ಉದ್ಯೋಗ ನೇರ ಸಾಲ ಯೋಜನೆಯಡಿ ಸಾಲ ಪಡೆದು ಸಕಾಲದಲ್ಲಿ ಸಾಲವನ್ನು ಪೂರ್ಣ ಪ್ರಮಾಣದಲ್ಲಿ ಮರುಪಾವತಿಸಿದ ಫಲಾನುಭವಿಗಳಿಗೆ ಪುನಃ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.

ಹೆಚ್ಚಿನ ವಿವರಗಳಿಗೆ ನಿಗಮದ ಸಹಾಯವಾಣಿ ಸಂಖ್ಯೆ 9448451111, ವೆಬ್‌ಸೈಟ್ kacdc.karnataka.gov.in ಇಲ್ಲಿ ಹಾಗೂ ಭಾಗ್ಯ ನಿಲಯ, ಭಂಡಾರಿ ಗ್ಯಾಸ್ ಏಜೆನ್ಸಿ ಹತ್ತಿರ, 1ನೇ ಪ್ಯಾರಲಲ್ ರಸ್ತೆ, ಗಾಂಧಿನಗರ, ಶಿವಮೊಗ್ಗ–577201 ವಿಳಾಸದಲ್ಲಿ ಸಂಪರ್ಕಿಸಬಹುದು ನಿಗಮದ ಜಿಲ್ಲಾ ವ್ಯವಸ್ಥಾಪಕರು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.