ಅರ್ಜಿ ಆಹ್ವಾನ
ತೀರ್ಥಹಳ್ಳಿ: 2025– 26ನೇ ಸಾಲಿನ ಕೇಂದ್ರ ಪುರಸ್ಕೃತ ರಾಷ್ಟ್ರೀಯ ಖಾದ್ಯ ತೈಲ ಅಭಿಯಾನ ತಾಳೆ ಬೆಳೆ ಯೋಜನೆಯಡಿ ಹೊಸದಾಗಿ ತಾಳೆ ಬೆಳೆಸಲು ಇಚ್ಛಿಸುವ ರೈತರಿಗೆ ಸಹಾಯಧನ ನೀಡಲು ಅವಕಾಶವಿದೆ. ರೈತರು ಸದುಪಯೋಗಪಡಿಸಿಕೊಳ್ಳುವಂತೆ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಉಚಿತವಾಗಿ ತಾಳೆ ಸಸಿ ವಿತರಿಸಿ 3 ವರ್ಷಗಳವರೆಗೆ ನೆಟ್ಟ ಸಸಿಗಳ ನಿರ್ವಹಣೆಗೆ ಅವಕಾಶವಿರುತ್ತದೆ. ಹೊಸದಾಗಿ ತಾಳೆ ಬೆಳೆಯನ್ನು ಅಭಿವೃದ್ಧಿ ಪಡಿಸಲು ಇಚ್ಛಿಸುವ ಸಾಮಾನ್ಯ, ಪರಿಶಿಷ್ಟ ಜಾತಿ ಹಾಗೂ ಪಂಗಡದ ರೈತರು ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಕೆಗೆ ಮೇ 28 ಕೊನೆಯ ದಿನವಾಗಿದೆ. ಹೆಚ್ಚಿನ ಮಾಹಿತಿಗೆ ರೈತ ಸಂಪರ್ಕ ಕೇಂದ್ರ ಸಂಪರ್ಕಿಸುವಂತೆ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.