
ಪ್ರಜಾವಾಣಿ ವಾರ್ತೆ
ಸಾವು
(ಪ್ರಾತಿನಿಧಿಕ ಚಿತ್ರ)
ತೀರ್ಥಹಳ್ಳಿ: ಅಡಿಕೆ ಗೊನೆ ಕೀಳುವಾಗ ಆಕಸ್ಮಿಕವಾಗಿ ದೋಟಿ ವಿದ್ಯುತ್ ತಂತಿಗೆ ಸ್ಪರ್ಶಿಸಿ ಕೃಷಿ ಕಾರ್ಮಿಕ ಮೃತಪಟ್ಟ ಘಟನೆ ಬಸವಾನಿ ಸಮೀಪದ ಲಕ್ಷ್ಮೀಪುರ ಗ್ರಾಮದಲ್ಲಿ ಶನಿವಾರ ಸಂಜೆ ನಡೆದಿದೆ.
ಲಕ್ಷ್ಮೀಪುರ ರೈತ ಸುಂದರೇಶ್ ಅವರಿಗೆ ಸೇರಿದ ಅಡಿಕೆ ತೋಟದಲ್ಲಿ ಗೊನೆ ಕೀಳುವಾಗ ಈ ದುರ್ಘಟನೆ ಸಂಭವಿಸಿದೆ.
ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲ್ಲೂಕಿನ ದೋರಗಲ್ಲು ಗ್ರಾಮದ ಸತೀಶ್ (50) ಮೃತ ದುದೈವಿ. ಸತೀಶ್ ಈ ಭಾಗದಲ್ಲಿ ಹಲವು ವರ್ಷಗಳಿಂದ ಗೊನೆಗಾರರಾಗಿ ಕೆಲಸ ಮಾಡುತ್ತಿದ್ದು.
ಅದರಂತೆಯೇ ಶನಿವಾರ ಕೂಡ ಕೆಲಸಕ್ಕೆ ಆಗಮಿಸಿದ್ದರು. ಅವರಿಗೆ ಪತ್ನಿ , ಇಬ್ಬರು ಪುತ್ರಿಯರು ಇದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.