
ಸಾಗರ: ‘ಮಲೆನಾಡು ಭಾಗದಲ್ಲಿ ಕಾಣಿಸಿಕೊಂಡಿರುವ ಎಲೆಚುಕ್ಕಿ ರೋಗ ಅಡಿಕೆ ಬೆಳೆಗಾರರ ಪಾಲಿಗೆ ಶಾಪವಾಗಿ ಪರಿಣಮಿಸಿದೆ’ ಎಂದು ಶಾಸಕ ಗೋಪಾಲಕೃಷ್ಣ ಬೇಳೂರು ಹೇಳಿದರು.
ತಾಲ್ಲೂಕಿನ ಭಾನ್ಕುಳಿ ಗ್ರಾಮದಲ್ಲಿ ತೋಟಗಾರಿಕೆ ಇಲಾಖೆ, ಇರುವಕ್ಕಿಯ ಕೃಷಿ ವಿಶ್ವವಿದ್ಯಾಲಯ ಈಚೆಗೆ ಏರ್ಪಡಿಸಿದ್ದ ‘ಎಲೆಚುಕ್ಕಿ ರೋಗ ನಿಯಂತ್ರಣ ಮತ್ತು ನಿರ್ವಹಣೆ’ ಕುರಿತು ಪ್ರಾತ್ಯಕ್ಷಿಕೆಗೆ ಚಾಲನೆ ನೀಡಿ ಮಾತನಾಡಿದರು.
‘ತಾಲ್ಲೂಕಿನ ಭಾರಂಗಿ ಹೋಬಳಿಯ ಗ್ರಾಮಗಳಲ್ಲಿ ಎಲೆಚುಕ್ಕಿ ರೋಗದ ಪ್ರಮಾಣ ಹೆಚ್ಚಿದ್ದು ಅಡಿಕೆ ತೋಟವೆ ನಾಶವಾಗುತ್ತಿವೆ. ಕೃಷಿ ವಿಜ್ಞಾನಿಗಳು ಈ ವಿಷಯವನ್ನು ಗಂಭೀರವಾಗಿ ಪರಿಣಮಿಸಿ ರೋಗ ವ್ಯಾಪಕವಾಗಿರುವ ತೋಟಗಳಿಗೆ ಖುದ್ದಾಗಿ ಭೇಟಿ ನೀಡಬೇಕು’ ಎಂದು ಅವರು ಸಲಹೆ ನೀಡಿದರು.
‘ಈಗಿರುವ ಔಷಧಿಗಳ ಮೂಲಕ ರೋಗವನ್ನು ಹೇಗೆ ನಿಯಂತ್ರಣಕ್ಕೆ ತರಬಹುದು ಎನ್ನುವ ಜೊತೆಗೆ ರೋಗ ಹರಡದಂತೆ ತಡೆಯುವ ನೂತನ ಔಷಧಿಗಳ ಸಂಶೋಧನೆಗೆ ಕೃಷಿ ವಿಜ್ಞಾನಿಗಳು ಮುಂದಾಗಬೇಕು’ ಎಂದರು.
ಇರುವಕ್ಕಿ ಕೃಷಿ ವಿಶ್ವವಿದ್ಯಾಲಯದ ವಿಜ್ಞಾನಿಗಳು, ಕೃಷಿ ಇಲಾಖೆ ಅಧಿಕಾರಿ ಶಿವಪ್ರಕಾಶ್ ಬಿ.ಎಲ್. ಸೋಮರಾಜ್, ಕಲಸೆ ಚಂದ್ರಪ್ಪ, ತೋಟಗಾರಿಕೆ ಇಲಾಖೆ ಅಧಿಕಾರಿಗಳು ಹಾಜರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.