ಸೊರಬ: ತಾಲ್ಲೂಕಿನ ತವನಂದಿ ಗ್ರಾಮದ ಸಮೀಪ ನ.24ರಂದು ಮಧ್ಯರಾತ್ರಿ ಅಡಿಕೆ ವ್ಯಾಪಾರಿಗಳ ಕಾರು ಅಡ್ಡಗಟ್ಟಿ ₹ 15 ಲಕ್ಷ ದರೋಡೆ ಮಾಡಿ ಪರಾರಿಯಾಗಿದ್ದ ಮೂವರು ಆರೋಪಿಗಳನ್ನು ಆನವಟ್ಟಿ ಪೊಲೀಸರು ಶನಿವಾರ ಬಂಧಿಸಿದ್ದಾರೆ.
ತಲೆ ಮರೆಸಿಕೊಂಡಿದ್ದ ಆರೋಪಿಗಳಾದ ಸಾಗರದ ಕನ್ನಪ್ಪ, ವಿಶ್ವನಾಥ ಹಾಗೂ ನಫೀಸ್ ಅವರನ್ನು ಬನವಾಸಿ ರಸ್ತೆಯಲ್ಲಿ ಬಂಧಿಸಿದ್ದಾರೆ.
ಸಾಗರದ ಅಡಿಕೆ ವ್ಯಾಪಾರಿಗೆ ಸೇರಿದ ₹ 15 ಲಕ್ಷ ನಗದನ್ನು ಕಾರಿನಲ್ಲಿ ಸಾಗಿಸುತ್ತಿದ್ದಾಗತವನಂದಿ ಗ್ರಾಮದ ಬಳಿ ಅಡ್ಡಗಟ್ಟಿದ ದರೋಡೆಕೋರರು ದೊಣ್ಣೆಯಿಂದ ಹಲ್ಲೆ ನಡೆಸಿ ನಗದು ದೋಚಿ ಪರಾರಿಯಾಗಿದ್ದರು. ಆರೋಪಿಗಳಿಂದ ಒಂದು ಕಾರು ಹಾಗೂ ₹ 15 ಲಕ್ಷ ವಶಪಡಿಸಿಕೊಳ್ಳಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.