ADVERTISEMENT

ಗೌರವಧನ ಹೆಚ್ಚಳಕ್ಕೆ ಆಶಾ ಕಾರ್ಯಕರ್ತೆಯರ ಆಗ್ರಹ

​ಪ್ರಜಾವಾಣಿ ವಾರ್ತೆ
Published 30 ಜೂನ್ 2020, 14:20 IST
Last Updated 30 ಜೂನ್ 2020, 14:20 IST
ಶಿವಮೊಗ್ಗದಲ್ಲಿ ಮಂಗಳವಾರ ಆಶಾ ಕಾರ್ಯಕರ್ತೆಯರು ವಿವಿಧ ಬೇಡಿಕೆ ಈಡೇರಿಸಲು ಆಗ್ರಹಿಸಿ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದರು.
ಶಿವಮೊಗ್ಗದಲ್ಲಿ ಮಂಗಳವಾರ ಆಶಾ ಕಾರ್ಯಕರ್ತೆಯರು ವಿವಿಧ ಬೇಡಿಕೆ ಈಡೇರಿಸಲು ಆಗ್ರಹಿಸಿ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದರು.   

ಶಿವಮೊಗ್ಗ: ಪ್ರೋತ್ಸಾಹ ಧನ ಹಾಗೂ ಗೌರವಧನ ಒಟ್ಟಿಗೆ ಸೇರಿಸಿ ಮಾಸಿಕ ₨ 12 ಸಾವಿರ ಗೌರವಧನ ನಿಗದಿಪಡಿಸಬೇಕು ಎಂದು ಆಗ್ರಹಿಸಿ ಆಶಾ ಕಾರ್ಯಕರ್ತೆಯರುಮಂಗಳವಾರಜಿಲ್ಲಾಡಳಿತದ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು.

ಕೊರೊನಾಪ್ರಕರಣಗಳು ಹೆಚ್ಚಾಗುತ್ತಿವೆ. ಕಾರ್ಯಕರ್ತೆಯರುಕ್ಷೇತ್ರ ಕಾರ್ಯ ಮಾಡುವ ಕಾರಣ ಸೋಂಕು ತಗುಲಿದರೆ ಎಲ್ಲರಿಗೂ ಉಚಿತ ಚಿಕಿತ್ಸೆ ನೀಡಬೇಕು. ಚಿಕಿತ್ಸೆ ಅವಧಿಯಲ್ಲಿ ಸಂಪೂರ್ಣ ಗೌರವಧನ ನೀಡಬೇಕು. ಆವಶ್ಯಕತೆ ಇರುವಷ್ಟು ಮಾಸ್ಕ್, ಕೈಗವಸು, ಮುಖ ಗವಚ ಮತ್ತು ಸ್ಯಾನಿಟೈಸರ್ನೀಡಬೇಕು ಎಂದು ಆಗ್ರಹಿಸಿದರು.

ಸರ್ಕಾರ ಎಲ್ಲ ಬೇಡಿಕೆ ಈಡೇರಿಸಬೇಕು. ಇಂದಿನಿಂದಲೇ 7 ದಿನಗಳುರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು. ಈ ಅವಧಿಯಲ್ಲಿ ಬೇಡಿಕೆ ಈಡೇರಿಸದಿದ್ದರೆಜು.10ರಿಂದ ರಾಜ್ಯದ 42 ಸಾವಿರ ಆಶಾ ಕಾರ್ಯಕರ್ತೆಯರು ಆರೋಗ್ಯ ಸೇವೆ ಸ್ಥಗಿತಗೊಳಿಸುವರುಎಂದು ಎಚ್ಚರಿಕೆ ನೀಡಿದರು.

ADVERTISEMENT

ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರಸಂಘದ ಪದಾಧಿಕಾರಿಗಳಾದ ಕಮಲಾ, ಶೀಲಾಬಾಯಿ, ರೇಷ್ಮಾ, ಭಾರತಿ, ಸುನಿತಾ, ಸುಮಾ ಮನವಿ ಸಲ್ಲಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.