ADVERTISEMENT

ಸಾಗರ | ಒತ್ತುವರಿ ತೆರವಿಗೆ ಹೋಗಿದ್ದ ತಹಶೀಲ್ದಾರ್ ಕೊಲೆ ಯತ್ನ; 7 ಮಂದಿ ಬಂಧನ

​ಪ್ರಜಾವಾಣಿ ವಾರ್ತೆ
Published 12 ಜುಲೈ 2023, 15:54 IST
Last Updated 12 ಜುಲೈ 2023, 15:54 IST
ಸಾಗರಕ್ಕೆ ಸಮೀಪದ ಮಡಸೂರು ಗ್ರಾಮದಲ್ಲಿ ಮಂಗಳವಾರ ಸರ್ಕಾರಿ ಭೂಮಿ ಒತ್ತುವರಿ ತೆರವು ಕಾರ್ಯಾಚರಣೆಯಲ್ಲಿ ತಹಶೀಲ್ದಾರ್ ಮಲ್ಲೇಶ್ ಬಿ.ಪೂಜಾರ್ ಭಾಗಿಯಾಗಿದ್ದರು 
ಸಾಗರಕ್ಕೆ ಸಮೀಪದ ಮಡಸೂರು ಗ್ರಾಮದಲ್ಲಿ ಮಂಗಳವಾರ ಸರ್ಕಾರಿ ಭೂಮಿ ಒತ್ತುವರಿ ತೆರವು ಕಾರ್ಯಾಚರಣೆಯಲ್ಲಿ ತಹಶೀಲ್ದಾರ್ ಮಲ್ಲೇಶ್ ಬಿ.ಪೂಜಾರ್ ಭಾಗಿಯಾಗಿದ್ದರು    

ಸಾಗರ: ಸರ್ಕಾರಿ ಭೂಮಿಯ ಒತ್ತುವರಿ ತಡೆದು ಅಗಳ ನಿರ್ಮಿಸಲು ಮುಂದಾಗಿದ್ದ ತಹಶೀಲ್ದಾರ್, ಕಂದಾಯ, ಅರಣ್ಯ ಇಲಾಖೆ ಸಿಬ್ಬಂದಿ ಕರ್ತವ್ಯಕ್ಕೆ ಅಡ್ಡಿಪಡಿಸಿ ಕೊಲೆ ಯತ್ನ ನಡೆಸಿದ ಆರೋಪದ ಮೇರೆಗೆ ಮಡಸೂರು ಗ್ರಾಮದ ಏಳು ಜನರನ್ನು ಮಂಗಳವಾರ ಬಂಧಿಸಲಾಗಿದೆ.

ಹುಚ್ಚಪ್ಪ, ಆನಂದ್, ಗಂಗಾಧರ, ದೇವರಾಜ್, ವೀರೇಂದ್ರ, ಉಮೇಶ್, ಲಂಕೇಶ್ ಬಂಧಿತರು. ಮಡಸೂರು ಗ್ರಾಮದ ಸ.ನಂ. 71ರ ಸರ್ಕಾರಿ ಭೂಮಿಯನ್ನು ಒತ್ತುವರಿ ಮಾಡಲಾಗಿದೆ ಎಂಬ ದೂರಿನ ಆಧಾರದ ಮೇಲೆ ಕಂದಾಯ ಇಲಾಖೆ ಸಿಬ್ಬಂದಿ ಸ್ಥಳಕ್ಕೆ ತೆರಳಿದಾಗ ಅಲ್ಲಿ ಸರ್ಕಾರಿ ಜಾಗದಲ್ಲಿನ ಮರ ಕಡಿತಲೆ ಮಾಡಿರುವುದು ಬೆಳಕಿಗೆ ಬಂದಿದೆ.

ಅರಣ್ಯ ಇಲಾಖೆ ಸಿಬ್ಬಂದಿಯನ್ನು ಸ್ಥಳಕ್ಕೆ ಕರೆಸಿಕೊಂಡ ತಹಶೀಲ್ದಾರ್ ಮಲ್ಲೇಶ್ ಬಿ.ಪೂಜಾರ್ ಒತ್ತುವರಿ ತಡೆಯಲು ಅಗಳ ತೋಡಿಸಲು ಮುಂದಾಗಿದ್ದಾರೆ. ಈ ಸಂದರ್ಭದಲ್ಲಿ ಆರೋಪಿಗಳು ಕಂದಾಯ ಹಾಗೂ ಅರಣ್ಯ ಇಲಾಖೆ ಸಿಬ್ಬಂದಿಗೆ ಮಾರಕಾಸ್ತ್ರಗಳಿಂದ ಬೆದರಿಸಿ ಕೊಲೆ ಯತ್ನ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ. ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.