ADVERTISEMENT

ಚಾಲಕರ ಸಮಸ್ಯೆ ನಿವಾರಣೆಗೆ ಪ್ರಯತ್ನ

ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್. ಷಡಾಕ್ಷರಿ

​ಪ್ರಜಾವಾಣಿ ವಾರ್ತೆ
Published 10 ಜನವರಿ 2021, 16:57 IST
Last Updated 10 ಜನವರಿ 2021, 16:57 IST
ಶಿವಮೊಗ್ಗದ ಸಾರಥಿ ಭವನದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ವಾರ್ಷಿಕ ಡೈರಿ ಬಿಡುಗಡೆ ಕಾರ್ಯಕ್ರಮದಲ್ಲಿ ಕೊರೊನಾ ವಾರಿಯರ್‌ ಹಾಗೂ ನಿವೃತ್ತ ಸರ್ಕಾರಿ ವಾಹನ ಚಾಲಕರನ್ನು ಸನ್ಮಾನಿಸಲಾಯಿತು
ಶಿವಮೊಗ್ಗದ ಸಾರಥಿ ಭವನದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ವಾರ್ಷಿಕ ಡೈರಿ ಬಿಡುಗಡೆ ಕಾರ್ಯಕ್ರಮದಲ್ಲಿ ಕೊರೊನಾ ವಾರಿಯರ್‌ ಹಾಗೂ ನಿವೃತ್ತ ಸರ್ಕಾರಿ ವಾಹನ ಚಾಲಕರನ್ನು ಸನ್ಮಾನಿಸಲಾಯಿತು   

ಶಿವಮೊಗ್ಗ: ಸರ್ಕಾರಿ ವಾಹನ ಚಾಲಕರ ಸಮಸ್ಯೆ ನಿವಾರಣೆ, ಸರ್ಕಾರದ ಸವಲತ್ತು ಒದಗಿಸಲು ಎಲ್ಲ ರೀತಿಯ ಪ್ರಯತ್ನ ಮಾಡಲಾಗುವುದು ಎಂದು ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್. ಷಡಾಕ್ಷರಿ ಭರವಸೆ ನೀಡಿದರು.

ನಗರದ ಸಾರಥಿ ಭವನದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಕೊರೊನಾವಾರಿಯರ್‌ ಹಾಗೂ ನಿವೃತ್ತ ನೌಕರರಿಗೆ ಸನ್ಮಾನ, ವಾರ್ಷಿಕ ಡೈರಿ ಬಿಡುಗಡೆ ಕಾರ್ಯಕ್ರಮದಲ್ಲಿ ಮಾತನಾಡಿದರು.

ಕೊರೊನಾದಂತ ಸಂದಿಗ್ಧ ಪರಿಸ್ಥಿತಿಯಲ್ಲೂ ವಾಹನ ಚಾಲಕರು ಮಾದರಿಯಾಗಿ ಕೆಲಸ ಮಾಡಿದ್ದಾರೆ. ಎಲ್ಲರೂ ಸಂಘಟಿತರಾಗಬೇಕು ಎಂದು ಸಲಹೆ ನೀಡಿದರು.

ADVERTISEMENT

ಪ್ರಾಸ್ತವಿಕವಾಗಿ ಮಾತನಾಡಿದ ಸರ್ಕಾರಿ ವಾಹನ ಚಾಲಕರ ಜಿಲ್ಲಾಧ್ಯಕ್ಷ ಹಾಲೇಶಪ್ಪ, ‘ಜಿಲ್ಲೆಯಲ್ಲಿ ಖಾಲಿಯಿರುವ ವಾಹನ ಚಾಲಕರ ಹುದ್ದೆಯನ್ನು ಭರ್ತಿ ಮಾಡುವತ್ತ ಸರ್ಕಾರ ಗಮನ ಹರಿಸಬೇಕು. ಚಾಲಕರ ಸಮಸ್ಯೆಗಳ ಬಗ್ಗೆ ಸರ್ಕಾರದ ಗಮನ ಸೆಳೆಯಲಾಗಿದ್ದು, ಶೀಘ್ರದಲ್ಲೇ ಈಡೇರುವ ನಿರೀಕ್ಷೆ ಇದೆ’ ಎಂದು ಹೇಳಿದರು.

ಕೊರೊನಾ ವಾರಿಯರ್‌ಗಳು ಹಾಗೂ ಸರ್ಕಾರಿ ವಾಹನ ನಿವೃತ್ತ ಚಾಲಕರನ್ನು ಸನ್ಮಾನಿಸಲಾಯಿತು.

ಸಂಘದ ವಿಭಾಗೀಯ ಉಪಾಧ್ಯಕ್ಷ ಮೋಹನ್, ಪ್ರಧಾನ ಕಾರ್ಯದರ್ಶಿ ಶಾಂತರಾಜು, ಜಿ. ಹಾಲೇಶಪ್ಪ, ಜಯರಾಮ್, ಲಿಂಗಪ್ಪ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.