ಶಿವಮೊಗ್ಗ: ಹಿರಿಯ ರಾಜಕಾರಣಿ, ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಅವರಿಗೆ ಜಿಲ್ಲೆಯ ಎರಡು ವಿಶ್ವವಿದ್ಯಾಲಯಗಳಿಂದ ಡಾಕ್ಟರೇಟ್ ಗೌರವ ಘೋಷಿಸಿದ್ದು, ಒಂದೇ ದಿನ ಪ್ರದಾನ ಮಾಡಲಾಗುತ್ತದೆ.
ಕುವೆಂಪು ವಿಶ್ವವಿದ್ಯಾಲಯ ಹಾಗೂ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯಗಳು ಗೌರವ ಡಾಕ್ಟರೇಟ್ ಘೋಷಿಸಿದ್ದು, ಇದೇ 22ರಂದು ಪ್ರತ್ಯೇಕವಾಗಿ ನಡೆಯಲಿರುವ ಘಟಿಕೋತ್ಸವಗಳಲ್ಲಿ ರಾಜ್ಯಪಾಲ ಥಾವರ್‌ಚಂದ್ ಗೆಹಲೋತ್ ಅವರು ತಿಮ್ಮಪ್ಪ ಅವರಿಗೆ ಗೌರವ ಡಾಕ್ಟರೇಟ್ ಪ್ರದಾನ ಮಾಡಲಿದ್ದಾರೆ.
ಕುವೆಂಪು ವಿಶ್ವವಿದ್ಯಾಲಯದಲ್ಲಿ ಬುಧವಾರ ಬೆಳಿಗ್ಗೆ 10.30ಕ್ಕೆ ಘಟಿಕೋತ್ಸವ ಆಯೋಜನೆಗೊಂಡಿದ್ದರೆ, ಮಧ್ಯಾಹ್ನ 2ಕ್ಕೆ ಇರುವಕ್ಕಿ ಕ್ಯಾಂಪಸ್‌ನಲ್ಲಿ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯದ ಘಟಿಕೋತ್ಸವ ನಡೆಯಲಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.