ADVERTISEMENT

ಶಿಕ್ಷಣ ಸಾಲ ಮನ್ನಾ ಮಾಡುವಂತೆ ಆಯನೂರು ಮುಂಜುನಾಥ್ ಒತ್ತಾಯ

​ಪ್ರಜಾವಾಣಿ ವಾರ್ತೆ
Published 27 ಫೆಬ್ರುವರಿ 2022, 4:26 IST
Last Updated 27 ಫೆಬ್ರುವರಿ 2022, 4:26 IST
ಮಂಜುನಾಥ್
ಮಂಜುನಾಥ್   

ಶಿವಮೊಗ್ಗ: ಶಿಕ್ಷಣ ಸಾಲ ಮತ್ತು ಬಡ್ಡಿ ಮನ್ನಾ ಮಾಡುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ವಿಧಾನಪರಿಷತ್ ಸದಸ್ಯ ಆಯನೂರು ಮುಂಜುನಾಥ್ ಮನವಿ ಮಾಡಿದ್ದಾರೆ.

ರೈತರು, ಮಧ್ಯಮ ವರ್ಗದವರ ಮಕ್ಕಳು ಶೈಕ್ಷಣಿಕ ಸಾಲ ಪಡೆದು ಮಕ್ಕಳ ವ್ಯಾಸಂಗ ಮಾಡಿಸುತ್ತಿದ್ದಾರೆ. ಆದರೆ, ವ್ಯಾಸಂಗ ಮುಗಿದ ನಂತರ ಬಹುತೇಕರು ನಿರುದ್ಯೋಗಿಗಳಾಗಿದ್ದು, ಸಾಲ ತೀರಿಸುವುದು ಅಸಾಧ್ಯವಾಗಿದೆ. ಪರಿಣಾಮವಾಗಿ ಸಾಲ ಪಡೆಯುವಾಗ ಭದ್ರತೆಗಾಗಿ ನೀಡಿದ್ದ ರೈತ ಹಾಗೂ ಮಧ್ಯಮ ವರ್ಗದವರ ಜಮೀನು, ಮನೆ ಇತ್ಯಾದಿ ಹರಾಜು ಹಾಕಲಾಗುತ್ತಿದೆ. ವಿದ್ಯಾರ್ಥಿಗಳು ಆತ್ಮಹತ್ಯೆಗೆ ಶರಣಾಗುತ್ತಿದ್ದಾರೆ. ಹೀಗಾಗಿ ಶೈಕ್ಷಣಿಕ ಸಾಲ ಮನ್ನಾ ಮಾಡಬೇಕು ಅಥವಾ ಬಡ್ಡಿಯನ್ನಾದರೂ ಮನ್ನಾ ಮಾಡಲು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ಹಳೆ ಪಿಂಚಣಿ ಮುಂದುವರಿಸಿ: ಹಳೆ ಪಿಂಚಣಿ ಯೋಜನೆ ಮುಂದುವರಿಸಬೇಕು ಎಂದು ಆಯನೂರು ಮಂಜುನಾಥ್ ಒತ್ತಾಯಿಸಿದ್ದಾರೆ. ರಾಜಸ್ಥಾನ ಸರ್ಕಾರ ನೂತನ ಪಿಂಚಣಿ ಯೋಜನೆ ರದ್ದುಗೊಳಿಸಿ ಹಳೆ ಪಿಂಚಣಿ ಯೋಜನೆ ಮುಂದುವರಿಸುವ ನಿರ್ಧಾರ ತೆಗೆದುಕೊಳ್ಳುವ ಮೂಲಕ ಸರ್ಕಾರಿ ನೌಕರರ ಭವಿಷ್ಯಕ್ಕೆ ಭದ್ರತೆ ಒದಗಿಸಿದೆ. ರಾಜ್ಯದಲ್ಲಿ ಸರ್ಕಾರಿ ನೌಕರಿಗೆ ಹೊಸ ಪಿಂಚಣಿ ಯೋಜನೆ ರದ್ದುಗೊಳಿಸಿ, ಈ ಹಿಂದೆ ಇದ್ದಂತೆ ಹಳೆ ಪಿಂಚಣಿ ಯೋಜನೆ ಜಾರಿಗೊಳಿಸಬೇಕು ಎಂದು ಒತ್ತಾಯಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.