ಅಪಘಾತ, –ಪ್ರಾತಿನಿಧಿಕ ಚಿತ್ರ
–ಪ್ರಾತಿನಿಧಿಕ ಚಿತ್ರ
ಶಿವಮೊಗ್ಗ: ತಾಲ್ಲೂಕಿನ ಆಯನೂರು ಕೋಟೆ ಬಳಿ ಶುಕ್ರವಾರ ರಾತ್ರಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಎರಡು ಬೈಕ್‌ಗಳು ಮುಖಾಮುಖಿ ಡಿಕ್ಕಿಯಲ್ಲಿ ಇಬ್ಬರು ಯುವಕರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮತ್ತೊಬ್ಬ ಯುವಕನಿಗೆ ಗಂಭೀರ ಗಾಯವಾಗಿದೆ.
ಮೃತರನ್ನು ಶಿವಮೊಗ್ಗ ತಾಲ್ಲೂಕಿನ ಹಾರನಹಳ್ಳಿ ಬಳಿಯ ಮಲ್ಲಾಪುರದ ನಿವಾಸಿಗಳಾದ ಅಸಿಫ್ (21) ಮತ್ತು ಚಾಂದ್ ಪೀರ್ (18) ಎಂದು ಗುರುತಿಸಲಾಗಿದೆ.
ಇಬ್ಬರೂ ಆಯನೂರಿನಿಂದ ಹಾರನಹಳ್ಳಿ ಕಡೆಗೆ ಬೈಕ್‌ನಲ್ಲಿ ತೆರಳುತ್ತಿದ್ದರು.
ಅಪಘಾತದಲ್ಲಿ ಗಾಯಗೊಂಡ ಯುವಕನನ್ನು ಶಿವಮೊಗ್ಗ ತಾಲೂಕಿನ ಕ್ಯಾತಿನಕೆರೆ ಗ್ರಾಮದ ಗುರುಕಿರಣ್ (27) ಎಂದು ಗುರುತಿಸಲಾಗಿದೆ. ಈತ ಚಾಮೇನಹಳ್ಳಿಯಿಂದ ಆಯನೂರು ಕಡೆಗೆ ಬೈಕ್ ನಲ್ಲಿ ಬರುತ್ತಿದ್ದ .
ಬೈಕ್‌ಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ತಕ್ಷಣ ಅಸಿಫ್ ಮತ್ತು ಚಾಂದ್ ಪೀರ್ ರಸ್ತೆಗೆ ಬಿದ್ದಿದ್ದಾರೆ. ಈ ವೇಳೆ, ಹಿಂದಿನಿಂದ ಅತೀ ವೇಗವಾಗಿ ಬಂದ ಯಾವುದೋ ವಾಹನವು ರಸ್ತೆಯ ಮೇಲೆ ಬಿದ್ದಿದ್ದ ಯುವಕರ ಮೇಲೆ ಹರಿದು ಹೋಗಿದೆ. ಆಗ ಇಬ್ಬರೂ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ.
ಮೃತ ಯುವಕನ ಮೈಮೇಲೆ ವಾಹನದ ಟೈರ್ ಮಾರ್ಕ್‌ಗಳು ಅಚ್ಚಾಗಿರುವುದು ಘಟನೆಯ ಭೀಕರತೆ ಬಿಂಬಿಸುತ್ತದೆ. ಮತ್ತೊಂದು ಬೈಕ್‌ನಲ್ಲಿದ್ದ ಗುರುಕಿರಣ್‌ಗೆ ಗಂಭೀರ ಗಾಯಗಳಾಗಿದ್ದು, ತಕ್ಷಣವೇ ಆತನನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಮೆಗ್ಗಾನ್ ಆಸ್ಪತ್ರೆಯ ಶವಾಗಾರಕ್ಕೆ ಸ್ಥಳಾಂತರಿಸಲಾಗಿದೆ. ಕುಂಸಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.