ADVERTISEMENT

ಆರೋಗ್ಯ ಸಿಬ್ಬಂದಿಗೆ ರಕ್ಷಣೆ ನೀಡಲು ಆಗ್ರಹ

​ಪ್ರಜಾವಾಣಿ ವಾರ್ತೆ
Published 21 ಏಪ್ರಿಲ್ 2020, 15:50 IST
Last Updated 21 ಏಪ್ರಿಲ್ 2020, 15:50 IST
ಆಯನೂರು ಮಂಜುನಾಥ್
ಆಯನೂರು ಮಂಜುನಾಥ್   

ಶಿವಮೊಗ್ಗ: ಆಶಾ ಕಾರ್ಯಕರ್ತೆಯರು,ಆರೋಗ್ಯ ಸಿಬ್ಬಂದಿ ಮೇಲಿನ ಹಲ್ಲೆ ಸಹಿಸಲು ಸಾಧ್ಯವಿಲ್ಲ. ರಾಜ್ಯ ಸರ್ಕಾರ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ರಾಜ್ಯ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಇಲಾಖೆ ಗುತ್ತಿಗೆ ನೌಕರರ ಸಂಘದ ಸಂಯೋಜಿತ ಸಂಸ್ಥೆ ಭಾರತೀಯ ಮಜ್ದೂರ್ ಸಂಘದ ಗೌರವ ಅಧ್ಯಕ್ಷ ಆಯನೂರು ಮಂಜುನಾಥ್ಒತ್ತಾಯಿಸಿದರು.

ಕೊರೊನಾ ವೈರಸ್‌ ಹರಡುತ್ತಿರುವ ಇಂತಹಕಠಿಣ ಪರಿಸ್ಥಿತಿಯಲ್ಲಿಆಶಾ ಕಾರ್ಯಕರ್ತೆಯರು, ಆರೋಗ್ಯ ಸಿಬ್ಬಂದಿ ತಮ್ಮ ಪ್ರಾಣ ಪಣಕ್ಕಿಟ್ಟು ಸೇವೆ ಸಲ್ಲಿಸುತ್ತಿದ್ದಾರೆ. ಜನರ ಜೀವ ಉಳಿಸಲು ಹೋರಾಟ ಮಾಡುತ್ತಿರುವ ಇಂತಹ ಯೋಧರ ಮೇಲೆ ಮೇಲೆ ಹಲ್ಲೆನಡೆಸುವುದು ಅಕ್ಷಮ್ಯ ಅಪರಾಧ. ಪಾದರಾಯನಪುರದ ಘಟನೆ ಜೀವ ವಿರೋಧಿಎಂದು ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಆಕ್ರೋಶ ವ್ಯಕ್ತಪಡಿಸಿದರು’

ಶಾಸಕ ಜಮೀರ್ ಅಹಮದ್‌ ಖಾನ್ ಹೇಳಿಕೆ ಖಂಡನೀಯ. ಅವರುಸರ್ಕಾರಕ್ಕಿಂತ ದೊಡ್ಡವರೇ? ಸರ್ಕಾರಇಂತಹ ಶಾಸಕನ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು.ಆಕ್ಷೇತ್ರದಲ್ಲಿ ಎರಡನೇ ಬಾರಿ ಗಲಾಟೆ ನಡೆಯುತ್ತಿದೆ. ಹಲ್ಲೆ ಮಾಡಿದವರನ್ನು ಹದ್ದುಬಸ್ತಿನಲ್ಲಿ ಇಡಬೇಕು. ಇಂತಹ ಸ್ಥಳಗಳಿಗೆ ಆರೋಗ್ಯ ಸಿಬ್ಬಂದಿ ಕಳುಹಿಸಬಾರದು ಎಂದು ಆಗ್ರಹಿಸಿದರು.

ADVERTISEMENT

ಆರೋಗ್ಯ ಸಿಬ್ಬಂದಿಗೆ, ಆಶಾ ಕಾರ್ಯಕರ್ತೆಯರಿಗೆ ಸೇವಾ ಭದ್ರತೆ ಇಲ್ಲ. ಕನಿಷ್ಠ ವೇತನವೂ ಇಲ್ಲ. ರಜೆಗಳೂ ಇಲ್ಲ. ಕಿರುಕುಳವೂ ತಪ್ಪಿಲ್ಲ. ಕೇಂದ್ರದಿಂದ ಹಣ ಬಂದರೂ ರಾಜ್ಯದ ಆರ್ಥಿಕ ಇಲಾಖೆ ಹಣ ಬಿಡುಗಡೆ ಮಾಡಿಲ್ಲ. ರಾಜ್ಯದಲ್ಲಿ 46 ಸಾವಿರ ಆಶಾ ಕಾರ್ಯಕರ್ತೆಯರಿದ್ದಾರೆ. ಅವರು ತೀವ್ರ ಸಂಕಷ್ಟದಲ್ಲಿದ್ದಾರೆ. ರಾಜ್ಯ ಸರ್ಕಾರ ಅವರ ಕಷ್ಟಗಳನ್ನೇ ಮರೆತುಬಿಟ್ಟಿದೆ. ಸದ್ಯಕ್ಕೆ ಸರ್ಕಾರ ಇವರ ರಕ್ಷಣೆಗೆ ನಿಲ್ಲಬೇಕು. ಸರ್ಕಾರ ತಕ್ಷಣ ಈ ಕೆಲಸ ಮಾಡದಿದ್ದರೆ ಸರ್ಕಾರದ ವಿರುದ್ಧ ದನಿ ಎತ್ತಲು ಸಿದ್ಧಎಂದು ಎಚ್ಚರಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಭಾರತೀಯ ಮಜ್ದೂರ್ ಸಂಘದಮುಖಂಡರಾದಸದಾಶಿವ, ಮಾಜಿ ಶಾಸಕ ಕೆ.ಜಿ. ಕುಮಾರಸ್ವಾಮಿ, ಹಿರಣ್ಣಯ್ಯ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.