ಶಿಕಾರಿಪುರ: ಕೊಡಗಿನ ಬಿಜೆಪಿ ಕಾರ್ಯಕರ್ತ ವಿನಯ್ ಸೋಮಯ್ಯ ಆತ್ಮಹತ್ಯೆಗೆ ಶರಣಾದ ಪ್ರಕರಣವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿ ಪಾರದರ್ಶಕವಾಗಿ ತನಿಖೆ ನಡೆಸಬೇಕು ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಒತ್ತಾಯಿಸಿದರು.
ಪಟ್ಟಣದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿನಯ್ ಸೋಮಯ್ಯ ಆತ್ಮಹತ್ಯೆಗೆ ಶರಣಾಗುವಷ್ಟು ದುರ್ಬಲ ಮನಃಸ್ಥಿತಿಯವರಲ್ಲ. ರಾಜಕೀಯ ಒತ್ತಡದ ಕಾರಣಕ್ಕೆ ಅವರು ಆತ್ಮಹತ್ಯೆಗೆ ಶರಣಾಗಿರುವ ಸಾಧ್ಯತೆಗಳಿವೆ. ಸರ್ಕಾರ ಕೂಲಂಕಷ ತನಿಖೆ ನಡೆಸಿ ಪ್ರಕರಣಕ್ಕೆ ನ್ಯಾಯ ಒದಗಿಸಬೇಕು ಎಂದರು.
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಬಿಜೆಪಿ ಕಾರ್ಯಕರ್ತರ ಮೇಲೆ ವಿನಾಕಾರಣ ಎಫ್‌ಐಆರ್ ದಾಖಲಿಸಲಾಗುತ್ತಿದೆ. ಇದು ಸರಿಯಲ್ಲ. ಇನ್ನಾದರೂ ಈ ರೀತಿಯ ತಪ್ಪುಗಳಾಗದಂತೆ ಸರ್ಕಾರ ಎಚ್ಚರಿಕೆ ವಹಿಸಬೇಕು ಎಂದು ಅವರು ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.