ADVERTISEMENT

ಗುತ್ತಿಗೆದಾರರು ಕಾಂಗ್ರೆಸ್ ಪಕ್ಷದ ಪುಢಾರಿಗಳು: ಬಿ.ವೈ. ವಿಜಯೇಂದ್ರ ಆಕ್ರೋಶ

ಶೇ 40 ಕಮಿಷನ್ ಸರ್ಕಾರ ಆರೋಪಕ್ಕೆ ಬಿ.ವೈ. ವಿಜಯೇಂದ್ರ ಆಕ್ರೋಶ

​ಪ್ರಜಾವಾಣಿ ವಾರ್ತೆ
Published 12 ಸೆಪ್ಟೆಂಬರ್ 2022, 13:22 IST
Last Updated 12 ಸೆಪ್ಟೆಂಬರ್ 2022, 13:22 IST

ಶಿವಮೊಗ್ಗ: ಸರ್ಕಾರದ ಮೇಲೆ ಈಗ ಶೇ 40 ಕಮಿಷನ್ ಆರೋಪ ಮಾಡಿ ಬೊಬ್ಬೆ ಹೊಡೆಯುತ್ತಿರುವ ಗುತ್ತಿಗೆದಾರರು, ಈ ಹಿಂದೆ ಕಾಂಗ್ರೆಸ್ ಸರ್ಕಾರದ ಅಧಿಕಾರದ ಅವಧಿಯಲ್ಲಿ ಗುತ್ತಿಗೆದಾರರಾಗಿ ಕೆಲಸ ಮಾಡುತ್ತಿದ್ದ ಆ ಪಕ್ಷದ ಪುಡಾರಿಗಳು ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರಆರೋಪಿಸಿದರು. ಅವರ (ಗುತ್ತಿಗೆದಾರರ) ಹಿನ್ನೆಲೆಯ ಬಗ್ಗೆ ಬೆಳಕು ಚೆಲ್ಲುವಂತೆ ರಾಜ್ಯ ಸರ್ಕಾರಕ್ಕೆ ಆಗ್ರಹಿಸಿದರು.

ನಗರದಲ್ಲಿ ಸೋಮವಾರ ನಡೆದ ಬಿಜೆಪಿ ಜಿಲ್ಲಾ ಕಾರ್ಯಕಾರಿಣಿ ಸಭೆಯಲ್ಲಿ ಮಾತನಾಡಿದ ಅವರು, ’ ಕಾಂಗ್ರೆಸ್ ಪಕ್ಷದ ಅವಧಿಯಲ್ಲಿ ಅವರೆಲ್ಲ (ಗುತ್ತಿಗೆದಾರರು) ನೂರಾರು ಕೋಟಿ ರೂಪಾಯಿ ಮೊತ್ತದ ವ್ಯವಹಾರ ಮಾಡಿಕೊಂಡಿದ್ದವರು. ಅವರಿಗೆ ಈಗ ಬಿಜೆಪಿ ಸರ್ಕಾರ ಬಿಲ್ ಕೊಡಬೇಕು ಎಂಬುದು ಕಾಂಗ್ರೆಸ್‌ನ ಒತ್ತಾಯ. ಬಿಲ್ ಕೊಟ್ಟಿಲ್ಲ ಎಂಬ ಕಾರಣಕ್ಕೆ ಶೇ 40 ಕಮಿಷನ್ ಸರ್ಕಾರ ಎಂಬ ಆರೋಪ ಮಾಡುತ್ತಿದ್ದಾರೆ. ಅವರಿಗೆ (ಕಾಂಗ್ರೆಸ್‌) ನಾಚಿಕೆಯಾಗಬೇಕು‘ ಎಂದು ಆಕ್ರೋಶ ವ್ಯಕ್ತಪಡಿಸಿದರು. ‘ಇದಕ್ಕೆಲ್ಲ ಮುಂದಿನ ದಿನಗಳಲ್ಲಿ ನಮ್ಮ ಪಕ್ಷ ಸರಿಯಾದ ಉತ್ತರ ಕೊಡಲಿದೆ‘ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT