ಭದ್ರಾವತಿ: ಕನಕಮಂಟಪ ಮೈದಾನದಲ್ಲಿ ಫೆ.28ರಂದು ನಡೆದ ಕಬಡ್ಡಿ ಪಂದ್ಯಾವಳಿ ವೇಳೆಯ ಹಲ್ಲೆ ಪ್ರಕರಣ ಸಂಬಂಧ ನ್ಯಾಯಾಂಗ ಬಂಧನದಲ್ಲಿದ್ದ 15 ಮಂದಿಗೆ ಸೋಮವಾರ ಹೈಕೋರ್ಟ್ ಜಾಮೀನು ನೀಡಿದೆ.
ಶಾಸಕ ಬಿ.ಕೆ. ಸಂಗಮೇಶ್ವರ ಅವರ ಪುತ್ರ ಬಸವೇಶ್ ಸೇರಿ 15 ಮಂದಿಯನ್ನು ಘಟನೆ ಸಂಬಂಧ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿತ್ತು.
ಪ್ರಕರಣ ಸಂಬಂಧ ತನಿಖಾಧಿಕಾರಿ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದಾರೆ.ಪ್ರಕರಣದಲ್ಲಿ 22 ಜನರ ಹೆಸರನ್ನು ಉಲ್ಲೇಖಿಸಲಾಗಿತ್ತು. ಪ್ರಕರಣದಲ್ಲಿ ಭಾಗಿಯಾದ ಉಳಿದ 7 ಮಂದಿಗೂ ಹೈಕೋರ್ಟ್ ನಿರೀಕ್ಷಣಾ ಜಾಮೀನು ನೀಡಿದೆ ಎಂದು ಮೂಲಗಳು ತಿಳಿಸಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.