ADVERTISEMENT

ಬಜರಂಗ ದಳದ ಕಾರ್ಯಕರ್ತ ಹರ್ಷ ಹತ್ಯೆ ಪ್ರಕರಣ: ಸಹಜ ಸ್ಥಿತಿಯತ್ತ ಶಿವಮೊಗ್ಗ

​ಪ್ರಜಾವಾಣಿ ವಾರ್ತೆ
Published 23 ಫೆಬ್ರುವರಿ 2022, 7:18 IST
Last Updated 23 ಫೆಬ್ರುವರಿ 2022, 7:18 IST
ಅಗತ್ಯ ವಸ್ತುಗಳನ್ನು ಖರೀದಿಸಲು ಮುಂದಾದ ಜನರು
ಅಗತ್ಯ ವಸ್ತುಗಳನ್ನು ಖರೀದಿಸಲು ಮುಂದಾದ ಜನರು   

ಶಿವಮೊಗ್ಗ: ಬಜರಂಗ ದಳದ ಕಾರ್ಯಕರ್ತ ಹರ್ಷ ಹತ್ಯೆಯ ನಂತರ ಉದ್ವಿಗ್ನಗೊಂಡಿದ್ದ ಶಿವಮೊಗ್ಗ ನಗರ ಸಂಪೂರ್ಣ ಶಾಂತವಾಗಿದೆ.

ಅಂತ್ಯಸಂಸ್ಕಾರಕ್ಕೂ ಮುನ್ನ ನಡೆದ ಮೆರವಣಿಗೆ ಸಮಯದ ಅವಘಡಗಳು ಹಾಗೂ ಅಂತ್ಯ ಸಂಸ್ಕಾರದ ನಂತರ ರಾತ್ರಿ ಹಲವು ವಾಹನಗಳಿಗೆ ಬೆಂಕಿ ಹಚ್ಚಿದ ಪ್ರಕರಣಗಳು ನಡೆದಿದ್ದವು. ಹಾಗಾಗಿ, ನಗರದಲ್ಲಿ ಎರಡು ದಿನ ಕರ್ಫ್ಯೂ ಜಾರಿ ಮಾಡಲಾಗಿದೆ.

ಮಂಗಳವಾರ ಬೆಳಿಗ್ಗೆಯಿಂದ ಈಚೆಗೆ ಯಾವುದೇ ಅಹಿತಕರ ಘಟನೆಗಳು ನಡೆದಿಲ್ಲ. ಬುಧವಾರ ಬೆಳಿಗ್ಗೆ 6ರಿಂದ 9ರವರೆಗೆ ಅಗತ್ಯ ವಸ್ತುಗಳ ಖರೀದಿಗೆ ಅವಕಾಶ ಮಾಡಿಕೊಡಲಾಗಿತ್ತು. ಜನರು ಮನೆಯಿಂದ ಹೊರಬಂದು ಅಗತ್ಯ ಸಾಮಗ್ರಿಗಳನ್ನು ಖರೀದಿಸಿದರು.

ADVERTISEMENT

ಹರ್ಷ ಮನೆ ಇರುವ ಸೀಗೆಹಟ್ಟಿ ಸೇರಿದಂತೆ ಹಳೇ ನಗರದ ಸೂಕ್ಷ್ಮ ಪ್ರದೇಶಗಳು ಹಾಗೂ ಕೊಲೆ ಆರೋಪಿಗಳ ಪ್ರದೇಶಗಳಲ್ಲಿ ಸಾಕಷ್ಟು ಪೊಲೀಸರನ್ನು ನಿಯೋಜಿಸಲಾಗಿದೆ.

ನಗರದ ಪ್ರಮುಖ ಮಾರ್ಗಗಳಲ್ಲಿ ಪೊಲೀಸ್ ಪಡೆ ಬೆಳಿಗ್ಗೆಯಿಂದಲೇ ಗಸ್ತು ತಿರುಗುತ್ತಿವೆ.

ಹರ್ಷ ಮನೆಗೆ ವಿವಿಧ ಮಠಾಧೀಶರು: ಬುಧವಾರವೂ ಮೃತ ಹರ್ಷ ಮನೆಗೆ ಕಾಗಿನೆಲೆ ಶ್ರೀ, ಮಾದಾರ ಚೆನ್ನಯ್ಯ ಸ್ವಾಮೀಜಿ, ಕುಂಚಿಟಿಗ ಸಂಸ್ಥಾನದ ಶ್ರೀಗಳು ಸೇರಿದಂತೆ ವಿವಿಧ ಮಠಾಧೀಶರು ಭೇಟಿ ನೀಡಲಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.