ರಿಪ್ಪನ್‌ಪೇಟೆ: ಪಟ್ಟಣದ ಮುಸ್ಲಿಮರು ಶನಿವಾರ ಅತ್ಯಂತ ಸಂಭ್ರಮದಿಂದ ಬಕ್ರೀದ್ ಹಬ್ಬ ಆಚರಿಸಿದರು.
ಹೊಸನಗರ ರಸ್ತೆಯ ಮೊಹಿಯುದ್ದೀನ್ ಜುಮ್ಮಾ ಮಸೀದಿ, ಮೆಕ್ಕಾ ಮಸೀದಿ, ಮದೀನಾ ಮಸೀದಿ ಹಾಗೂ ಗಾಳಿಬೈಲು ಮಸೀದಿಯ ಧರ್ಮಗುರುಗಳ ನೇತೃತ್ವದಲ್ಲಿ ಮುಸ್ಲಿಮರು ಸಾಗರ ರಸ್ತೆಯಲ್ಲಿರುವ ಈದ್ಗಾ ಮೈದಾನಕ್ಕೆ ತೆರಳಿ ಪ್ರಾರ್ಥನೆ ಸಲ್ಲಿಸಿದರು.
ನಂತರ ನಡೆದ ಧರ್ಮಸಭೆಯಲ್ಲಿ ಮೊಹಿಯುದ್ದೀನ್ ಜುಮ್ಮಾ ಮಸೀದಿಯ ಧರ್ಮಗುರು ಮುನೀರ್ ಸಖಾಫಿ ಮಾತನಾಡಿ, ಪ್ರತಿಯೊಂದು ಹಬ್ಬಗಳು ಭಾರತೀಯ ಸಂಸ್ಕೃತಿಯ ಪ್ರತೀಕವಾಗಿವೆ. ಜಾತೀಯತೆಯನ್ನು ಬಿಟ್ಟು ಧರ್ಮವನ್ನು ಗೌರವಿಸುವ ಪರಿಪಾಠ ಬೆಳೆಯಬೇಕು. ಸಹೋದರತ್ವ ಸಹಬಾಳ್ವೆ ನಡೆಸಬೇಕು ಎಂದರು.
ಇದೇ ಸಂದರ್ಭದಲ್ಲಿ ರಿಪ್ಪನ್ ಪೇಟೆಯ ಈದ್ಗಾ ಮೈದಾನದಲ್ಲಿ ಸರ್ಕಾರದ ₹50,000 ಅನುದಾನದಲ್ಲಿ ಅಳವಡಿಸಲಾಗಿದ್ದ ಹೈಮಾಸ್ಟ್ ದೀಪವನ್ನು ಉದ್ಘಾಟಿಸಲಾಯಿತು.
ಬಕ್ರೀದ್ ಹಿನ್ನೆಲೆಯಲ್ಲಿ ರಿಪ್ಪನ್‌ಪೇಟೆ, ಅಮೃತ, ಎಣ್ಣೆನೊಡ್ಲು, ಕೆಂಚನಾಲ, ಗಾಳಿಬೈಲು, ಕೋಡೂರು, ಸುಣ್ಣದಬಸ್ತಿ ಗ್ರಾಮದಲ್ಲಿ ಮುಸ್ಲಿಮರು ಈದ್ಗಾ ಮೈದಾನಕ್ಕೆ ತೆರಳಿ ಪ್ರಾರ್ಥನೆ ಸಲ್ಲಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.