
ಪ್ರಜಾವಾಣಿ ವಾರ್ತೆ
ಸತೀಶ ಜಾರಕಿಹೊಳಿ
ಶಿವಮೊಗ್ಗ: ‘ಬಳ್ಳಾರಿ ಘಟನೆ ರಾಜ್ಯ ಸರ್ಕಾರಕ್ಕೆ ಮುಜುಗರ ತರುವ ವಿಚಾರ. ಅದು ಸಣ್ಣ ಘಟನೆ. ಅಷ್ಟು ದೊಡ್ಡದು ಆಗಬಾರದಿತ್ತು. ತನಿಖೆ ಬಳಿಕ ತಪ್ಪಿತಸ್ಥರು ಯಾರೆಂದು ತಿಳಿಯಲಿದೆ’ ಎಂದು ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಇಲ್ಲಿ ಹೇಳಿದರು.
ರಾಜ್ಯಮಟ್ಟದ ವಾಲ್ಮೀಕಿ ಕಪ್ ಕ್ರಿಕೆಟ್ ಟೂರ್ನಿ ಉದ್ಘಾಟನೆಗೆ ಭಾನುವಾರ ನಗರಕ್ಕೆ ಬಂದಿದ್ದ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.
‘ಬಳ್ಳಾರಿ ಘಟನೆಯನ್ನು ಸಿಐಡಿ ತನಿಖೆಗೆ ಒಪ್ಪಿಸುವ ಬಗ್ಗೆ ಸರ್ಕಾರ ನಿರ್ಧರಿಸಿದೆ. ಹೀಗಾಗಿ ಸಿಬಿಐ ತನಿಖೆಗೆ ವಹಿಸುವ ಅಗತ್ಯವಿಲ್ಲ. ಅಲ್ಲಿ ಸರಿಯಾಗಿ ಪರಿಸ್ಥಿತಿ ನಿರ್ವಹಣೆ ಮಾಡದಿರುವುದೇ ಎಸ್ಪಿ ಅಮಾನತಿಗೆ ಕಾರಣ’ ಎಂದು ಅವರು ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.