ADVERTISEMENT

ಬಂಜಾರ ಸಮಾಜದವರ ಬಂಧನ: ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 28 ಮಾರ್ಚ್ 2023, 6:21 IST
Last Updated 28 ಮಾರ್ಚ್ 2023, 6:21 IST
ಶಿವಮೊಗ್ಗದ ಜಿಲ್ಲಾಧಿಕಾರಿ ಕಚೇರಿ ಎದುರು ಸೋಮವಾರ ರಾತ್ರಿ ಬಂಜಾರ ಸಮಾಜದವರು ಪ್ರತಿಭಟನೆ ನಡೆಸಿದರು
ಶಿವಮೊಗ್ಗದ ಜಿಲ್ಲಾಧಿಕಾರಿ ಕಚೇರಿ ಎದುರು ಸೋಮವಾರ ರಾತ್ರಿ ಬಂಜಾರ ಸಮಾಜದವರು ಪ್ರತಿಭಟನೆ ನಡೆಸಿದರು   

ಶಿವಮೊಗ್ಗ: ಶಿಕಾರಿಪುರದಲ್ಲಿ ನಡೆದ ಪ್ರತಿಭಟನೆ ವೇಳೆ ಬಂಜಾರ ಸಮುದಾಯದ ಹಲವರನ್ನು ಪೊಲೀಸರು ಬಂಧಿಸಿದ್ದಾರೆ. ಅವರನ್ನು ಕೂಡಲೇ ಬಿಡುಗಡೆಗೊಳಿಸಬೇಕು ಎಂದು ಆಗ್ರಹಿಸಿ ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಎದುರು ಸೋಮವಾರ ರಾತ್ರಿ ಸಮುದಾಯದ ಮುಖಂಡರು ಪ್ರತಿಭಟನೆ ನಡೆಸಿದರು. ಈ ವೇಳೆ ಜಿಲ್ಲಾಡಳಿತದ ವಿರುದ್ಧ ಘೋಷಣೆ ಕೂಗಿದರು.

'ತಪ್ಪು ತಿಳಿವಳಿಕೆಯಿಂದ ಬಂಜಾರ ಸಮುದಾಯದವರು ನನ್ನ ವಿರುದ್ಧ ಪ್ರತಿಭಟನೆ ಮಾಡಿದ್ದಾರೆ. ಯಾರನ್ನೂ ಬಂಧಿಸಬೇಡಿ ಎಂದು ಮಾಧ್ಯಮಗಳಲ್ಲಿ ಬಿಜೆಪಿ ಸಂಸದೀಯ ಮಂಡಳಿಯ ಸದಸ್ಯ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ. ಆದರೆ ಇಲ್ಲಿ ಸಮುದಾಯದವರನ್ನು ದೊಡ್ಡ ಸಂಖ್ಯೆಯಲ್ಲಿ ವಿಚಾರಣೆ ನೆಪದಲ್ಲಿ ಕರೆದೊಯ್ದು ಬಂಧಿಸಲಾಗಿದೆ. ಪೊಲೀಸರು ಕೂಡ ಈ ಬಗ್ಗೆ ಸರಿಯಾಗಿ ಮಾಹಿತಿ ನೀಡುತ್ತಿಲ್ಲ. ಸಂವಿಧಾನಾತ್ಮಕವಾಗಿ ಪ್ರತಿಭಟನೆ ನಡೆಸಿದವರನ್ನು ಬಂಧಿಸುವ ಮೂಲಕ ಪೊಲೀಸರು ನಮ್ಮ ಮೂಲಭೂತ ಹಕ್ಕನ್ನು ಕಸಿದುಕೊಂಡಿದ್ದಾರೆ' ಎಂದು ಪ್ರತಿಭಟನಾಕಾರರು ದೂರಿದರು.

ಭೋವಿ ಸಮಾಜದ ಮುಖಂಡ ಜಗದೀಶ್, ಬಂಜಾರ ಸಮುದಾಯದ ಮುಖಂಡರಾದ ಖೆಮ್ಯಾನಾಯ್ಕಾ, ವಿನಯ್ ರಾಜಾವತ್ ಇದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.