ಕರಡಿ
ಹೊಳೆಹೊನ್ನೂರು: ಸಮೀಪದ ಸನ್ಯಾಸಿ ಕೋಡಮಗ್ಗಿ ಹಾಗೂ ಹೊಳಲೂರು ನಡುವಿನ ಸೇತುವೆ ಮೇಲೆ ಸೋಮವಾರ ಕರಡಿಯೊಂದು ಕಾಣಿಸಿಕೊಂಡಿದ್ದು, ಜನರಲ್ಲಿ ಆತಂಕ ಮೂಡಿಸಿದೆ.
ಕಾರಿನ ಸವಾರರು ಕರಡಿಯ ವಿಡಿಯೊ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿದ್ದಾರೆ. ಈ ಹಿಂದೆ ಅಗಸನಹಳ್ಳಿ ಹಾಗೂ ಡಣಾಯಕಪುರ ಗ್ರಾಮಗಳಲ್ಲಿ ಕರಡಿಗಳನ್ನು ಸೆರೆಹಿಡಿಯಲಾಗಿತ್ತು. ಕಳೆದ ವಾರ ಮಲ್ಲಾಪುರ ಸರ್ಕಲ್‌ನ ಶ್ರೀನಿವಾಸ ರೆಡ್ಡಿ ಅವರ ಮನೆಯ ಸಮೀಪ ಕರಡಿಯೊಂದು ಕಾಣಿಸಿಕೊಂಡಿದ್ದು ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿತ್ತು. ಇದೀಗ ಹೊಳಲೂರಿನ ಸೇತುವೆ ಮೇಲೆ ಮತ್ತೆ ಕರಡಿ ಕಾಣಿಸಿಕೊಂಡಿದ್ದು, ಅರಣ್ಯ ಇಲಾಖೆ ಸಿಬ್ಬಂದಿ ಕರಡಿಯನ್ನು ಸೆರೆಹಿಡಿದು ಕಾಡಿಗೆ ಬಿಡಲು ಕ್ರಮ ಕೈಗೊಳ್ಳಬೇಕು ಎಂದು ಸ್ಥಳೀಯರು ಆಗ್ರಹಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.