ADVERTISEMENT

ತರಗತಿಗೆ ಹಾಜರಾಗದೆ ಪರೀಕ್ಷೆ ಬರೆದ ಬಿ.ಇಡಿ ವಿದ್ಯಾರ್ಥಿಗಳು: ದೂರು

​ಪ್ರಜಾವಾಣಿ ವಾರ್ತೆ
Published 4 ಅಕ್ಟೋಬರ್ 2022, 5:58 IST
Last Updated 4 ಅಕ್ಟೋಬರ್ 2022, 5:58 IST

ಸಾಗರ: ಇಲ್ಲಿನ ಮಲೆನಾಡು ಅಭಿವೃದ್ಧಿ ಪ್ರತಿಷ್ಠಾನದ ಅಂಗ ಸಂಸ್ಥೆಯಾದ ಡಾ.ಜಿ.ಎ. ನಾರಿಬೋಲಿ ಶಿಕ್ಷಣ ಮಹಾವಿದ್ಯಾಲಯದಲ್ಲಿ ಬಿ.ಇಡಿಯ ಪ್ರಥಮ ಸೆಮಿಸ್ಟರ್‌ನಲ್ಲಿ 37, ಎರಡನೇ ವರ್ಷದಲ್ಲಿ 27 ವಿದ್ಯಾರ್ಥಿಗಳು ತರಗತಿಗೆ ಹಾಜರಾಗದೆ ಪರೀಕ್ಷೆ ಬರೆದಿದ್ದು, ಈ ಸಂಬಂಧ ತನಿಖೆ ನಡೆಸುವಂತೆ ಪ್ರತಿಷ್ಠಾನದ ಕೋಶಾಧ್ಯಕ್ಷ ಕವಲಕೋಡು ವೆಂಕಟೇಶ್ ಗ್ರಾಮಾಂತರ ಠಾಣೆ ಪೊಲೀಸರಿಗೆ ದೂರುನೀಡಿದ್ದಾರೆ.

ಇಲ್ಲಿನ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಉಪನ್ಯಾಸಕರಾಗಿ ಕೆಲಸ ಮಾಡುತ್ತಿದ್ದ ವೇಳೆಯಲ್ಲೇ ಕೆಲವರು ಬಿ.ಇಡಿ ತರಗತಿಗೆ ಹಾಜರಾಗಿರುವುದಾಗಿ ಹೇಳಿ ಪರೀಕ್ಷೆ ಬರೆದಿದ್ದಾರೆ. ಏಕ ಕಾಲದಲ್ಲಿ ಎರಡು ವಿಭಿನ್ನ ಸ್ಥಳಗಳಲ್ಲಿ ಹಾಜರಾತಿ ಹೊಂದುವುದು ಕಾನೂನಿನ ಉಲ್ಲಂಘನೆ ಎಂದು ದೂರಿನಲ್ಲಿ ಹೇಳಲಾಗಿದೆ.

ದೂರಿನೊಂದಿಗೆ ಮಾಹಿತಿ ಹಕ್ಕಿನ ಕಾಯ್ದೆಯಡಿ ಪಡೆದ ಸಾಗರದ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಕಾರ್ಯನಿರ್ವಹಿಸುತ್ತಿರುವ ಉಪನ್ಯಾಸಕರ ಪಟ್ಟಿಯನ್ನು ಹಾಜರುಪಡಿಸಲಾಗಿದೆ. ದೂರು ಸ್ವೀಕರಿಸಿರುವ ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.

ADVERTISEMENT

ದೂರು: ಎಂಡಿಎಫ್‌ನ ಹಿಂದಿನ ಪ್ರಧಾನ ಕಾರ್ಯದರ್ಶಿ ಜಗದೀಶ್ ಎಂ. ಅವರು ಸರ್ವ ಸದಸ್ಯರ ಸಭೆಯಲ್ಲಿ ನೂತನ ಪದಾಧಿಕಾರಿಗಳ ಆಯ್ಕೆಯ ನಂತರವೂ ಕಾರ್ಯಕಾರಿ ಮಂಡಳಿಯ ಸಭೆಗಳ ನಡಾವಳಿ ಪುಸ್ತಕವನ್ನು ಸಂಸ್ಥೆಗೆ ಹಸ್ತಾಂತರಿಸದೆ ತಮ್ಮ ಬಳಿಯೆ ಇಟ್ಟುಕೊಂಡಿದ್ದಾರೆ ಎಂದು ಅವರ ವಿರುದ್ಧ ಹಾಲಿ ಕೋಶಾಧ್ಯಕ್ಷ ಕವಲಕೋಡು ವೆಂಕಟೇಶ್ ಪೊಲೀಸರಿಗೆ ದೂರು ನೀಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.