
ಸಾಗರ : ಕಾರ್ಮಿಕರು ತಮ್ಮ ಮಕ್ಕಳಿಗೆ ಉತ್ತಮ ಶಿಕ್ಷಣ ಕೊಡಿಸುವ ಸಂಕಲ್ಪ ಮಾಡಬೇಕು ಎಂದು ಶಾಸಕ ಗೋಪಾಲಕೃಷ್ಣ ಬೇಳೂರು ಕಿವಿಮಾತು ಹೇಳಿದರು.
ಇಲ್ಲಿನ ನಗರಸಭೆ ಆವರಣದಲ್ಲಿ ಗುರುವಾರ ಕಾರ್ಮಿಕ ಇಲಾಖೆಯಿಂದ ಕಾರ್ಮಿಕರಿಗೆ ಟೂಲ್ ಕಿಟ್ ಮತ್ತು ಸುರಕ್ಷಾ ಕಿಟ್ ವಿತರಿಸಿ ಮಾತನಾಡಿದ ಅವರು, ಮಕ್ಕಳಿಗೆ ಉತ್ತಮ ವಿದ್ಯಾಭ್ಯಾಸ ನೀಡುವ ಮೂಲಕ ಅವರ ಬದುಕು ಹಸನುಗೊಳಿಸಿ ಎಂದರು.
ದೇಶ ನಿರ್ಮಾಣದಲ್ಲಿ ಕಾರ್ಮಿಕರ ಪಾತ್ರ ಅತ್ಯಂತ ಮಹತ್ವದ್ದಾಗಿದೆ. ಪ್ರತಿ ನಿರ್ಮಾಣ, ಅಭಿವೃದ್ದಿ ಕೆಲಸದ ಹಿಂದೆ ನಿಮ್ಮ ಶ್ರಮ ಇರುತ್ತದೆ. ಕಾರ್ಮಿಕರ ಶ್ರೇಯೋಭಿವೃದ್ದಿಗಾಗಿ ರಾಜ್ಯ ಸರ್ಕಾರ ಅನೇಕ ಯೋಜನೆ ಜಾರಿಗೆ ತಂದಿದೆ. ಅದರ ಸದ್ಭಳಕೆ ಮಾಡಿಕೊಳ್ಳಿ. ಕಾರ್ಮಿಕರಲ್ಲದವರು ಕಾರ್ಮಿಕ ಕಾರ್ಡ್ ಪಡೆದು ಸಿಗಬೇಕಾದ ಸೌಲಭ್ಯ ಪಡೆಯುತ್ತಿರುವ ಬಗ್ಗೆ ಗಮನ ಹರಿಸಿ ಎಂದು ಹೇಳಿದರು.
ವೇದಿಕೆಯಲ್ಲಿ ವಿಲ್ಸನ್ ಗೋನ್ಸಾಲ್ವಿಸ್, ರವೀಂದ್ರ ಸಾಗರ್, ಸುರೇಶಬಾಬು, ಗಣಪತಿ ಮಂಡಗಳಲೆ, ಸೋಮಶೇಖರ ಲ್ಯಾವಿಗೆರೆ, ಕಲಸೆ ಚಂದ್ರಪ್ಪ, ಗುರುಮೂರ್ತಿ, ಮಕ್ಬೂಲ್ ಅಹಮದ್ ಹಾಜರಿದ್ದರು. ಪೌರಾಯುಕ್ತ ಎಚ್.ಕೆ.ನಾಗಪ್ಪ ಸ್ವಾಗತಿಸಿದರು. ಶಿಲ್ಪ ನಿರೂಪಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.