ಶಿವಮೊಗ್ಗ: ಲೋಕಸಭಾ ಚುನಾವಣಾ ಫಲಿತಾಂಶದ ನಂತರ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಮೂಲೆಗುಂಪಾಗಲಿದ್ದಾರೆ. ಅವರ ಸ್ಥಾನವನ್ನು ಪಕ್ಷದ ಪ್ರಭಾವಿ ಮುಖಂಡ ಬಿ.ಎಲ್.ಸಂತೋಷ್ ತುಂಬಲಿದ್ದಾರೆ ಎಂದು ಸಾಗರದ ಮಾಜಿ ಶಾಸಕ, ಕಾಂಗ್ರೆಸ್ ಮುಖಂಡ ಗೋಪಾಲಕೃಷ್ಣ ಬೇಳೂರು ಭವಿಷ್ಯ ನುಡಿದರು.
ಕೇಂದ್ರ ಸಚಿವ ಸದಾನಂದ ಗೌಡ ಸೇರಿದಂತೆ ಬಿಜೆಪಿಯ ಹಲವು ಮುಖಂಡರು ಯಡಿಯೂರಪ್ಪ ಭವಿಷ್ಯದ ಬಗ್ಗೆ ಈಗಾಗಲೇ ಸೂಚ್ಯವಾಗಿ ಸುಳಿವು ನೀಡಿದ್ದಾರೆ. ಕೇಂದ್ರದಲ್ಲಿ ಅತ್ಯಂತ ಪ್ರಭಾವ ಹೊಂದಿರುವ ಸಂತೋಷ್ ಅವರು ರಾಜ್ಯದ ಚುಕ್ಕಾಣಿ ಹಿಡಿಯುವರು. ಯಡಿಯೂರಪ್ಪ ತೆರೆಮರೆಗೆ ಸರಿಯುತ್ತಿದ್ದಂತೆ ಶೋಭಾ ಮೇಡಂ ಆಟವೂ ಕೊನೆಯಾಗುತ್ತದೆ ಎಂದು ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಕುಟುಕಿದರು.
ರಾಜ್ಯ ಸರ್ಕಾರ ಬೀಳುತ್ತದೆ ಎಂಬ ಮಾತು ಕೇಳಿ ಸಾಕಾಗಿ ಹೋಗಿದೆ. ಕಿವಿಯಲ್ಲಿ ಹತ್ತಿ ಇಟ್ಟುಕೊಂಡು ಓಡಾಡುತ್ತಿದ್ದೇವೆ. ಉಮೇಶ್ ಕತ್ತಿ, ವಿ.ಸೋಮಣ್ಣ, ಶೋಭಾ ಕರಂದ್ಲಾಜೆ, ಆಯನೂರು ಮಂಜುನಾಥ್ ಅವರೆಲ್ಲ ಭ್ರಮೆಯಲ್ಲಿ ಇದ್ದಾರೆ. ಯಡಿಯೂರಪ್ಪ ಜತೆ ಅವರೆಲ್ಲ ಅಸ್ತಿತ್ವ ಕಳೆದುಕೊಳ್ಳುವ ಭೀತಿಎದುರಿಸುತ್ತಿದ್ದಾರೆ ಎಂದು ಛೇಡಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.