ಶಿವಮೊಗ್ಗ: ಭದ್ರಾ ಜಲಾಶಯದಿಂದ ಭದ್ರಾ ಬಲ ಮತ್ತು ಎಡದಂಡೆ ನಾಲೆ, ಆನವೇರಿ ಶಾಖಾ ನಾಲೆ, ದಾವಣಗೆರೆ, ಮಲೇಬೆನ್ನೂರು ಶಾಖಾ ನಾಲೆ ಮತ್ತು ಹರಿಹರ ಶಾಖಾ ನಾಲೆಗಳಿಗೆ ಹರಿಸುತ್ತಿರುವ ನೀರನ್ನು ನ. 25ರಂದು ನಿಲ್ಲಿಸಲಾಗುತ್ತಿದೆ.
2022–23ನೇ ಮುಂಗಾರು ಹಂಗಾಮಿನ ಬೆಳೆಗಳಿಗೆ ಹರಿಸಲಾಗುತ್ತಿರುವ ನೀರನ್ನು ನಿಲ್ಲಿಸುವ ಬಗ್ಗೆ ನ. 16ರ ಭದ್ರಾ ಅಚ್ಚುಕಟ್ಟು ಪ್ರಾಧಿಕಾರದ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ. ಅದರಂತೆ ಭದ್ರಾ ಅಚ್ಚುಕಟ್ಟಿನಲ್ಲಿ ಬರುವ ಎಲ್ಲ ರೈತರು ಇಲಾಖೆಯೊಂದಿಗೆ ಸಹಕರಿಸುವಂತೆ ಕರ್ನಾಟಕ ನೀರಾವರಿ ನಿಗಮದ ಪ್ರಕಟಣೆ ಕೋರಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.