ಭದ್ರಾ ಜಲಾಶಯ
ಶಿವಮೊಗ್ಗ: ಲಕ್ಕವಳ್ಳಿಯ ಭದ್ರಾ ಜಲಾಶಯದಿಂದ ಬಲದಂಡೆ ನಾಲೆಗೆ ಜುಲೈ 22ರ ಮಧ್ಯಾಹ್ನದಿಂದ ನೀರು ಹರಿಸಲು ಸೋಮವಾರ ಇಲ್ಲಿನ ಮಲವಗೊಪ್ಪದ ಕಾಡಾ ಕಚೇರಿಯಲ್ಲಿ ನಡೆದ ಭದ್ರಾ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ (ಐಸಿಸಿ) ತೀರ್ಮಾನಿಸಲಾಯಿತು.
ಸಭೆಯಲ್ಲಿ ಮಾಹಿತಿ ನೀಡಿದ ಐಸಿಸಿ ಅಧ್ಯಕ್ಷರೂ ಆದ ಜಿಲ್ಲಾ ಉಸ್ತುವಾರಿ ಸಚಿವ ಮಧು ಎಸ್.ಬಂಗಾರಪ್ಪ, ಬಲದಂಡೆ ವ್ಯಾಪ್ತಿಯ ಶಿವಮೊಗ್ಗ, ದಾವಣಗೆರೆ, ಚಿತ್ರದುರ್ಗ ಹಾಗೂ ವಿಜಯನಗರ ಜಿಲ್ಲೆಯ ಹರಪನಹಳ್ಳಿ ಭಾಗದ 1,05,570 ಹೆಕ್ಟೇರ್ ಜಮೀನಿಗೆ ಮುಂದಿನ 120 ದಿನಗಳ ಕಾಲ ನೀರು ಹರಿಸಲಾಗುವುದು ಎಂದರು.
ಭದ್ರಾ ಎಡದಂಡೆ ನಾಲೆಯ ಸ್ಲುಸ್ ಗೇಟ್ ಅಳವಡಿಕೆ ಕಾಮಗಾರಿ ನಡೆಯುತ್ತಿರುವುದರಿಂದ ಅದನ್ಜು ತುರ್ತಾಗಿ ಪೂರ್ಣಗೊಳಿಸಿ ಆಗಸ್ಟ್ ಎರಡನೇ ವಾರ ನೀರು ಹರಿಸಲು ದಿನಾಂಕ ನಿಗದಿಗೊಳಿಸುವಂತೆ ಕರ್ನಾಟಕ ನೀರಾವರಿ ನಿಗಮದ ಸೂಪರಿಂಟೆಂಡೆಂಟ್ ಎಂಜಿನಿಯರ್ ರವಿಚಂದ್ರ ಅವರಿಗೆ ಸಭೆಯಲ್ಲಿ ಸೂಚಿಸಲಾಯಿತು.
186 ಅಡಿ ನೀರು ಸಂಗ್ರಹಣಾ ಸಾಮರ್ಥ್ಯ ಹೊಂದಿರುವ ಭದ್ರಾ ಜಲಾಶಯದಲ್ಲಿ ಸದ್ಯ 179.8 ಅಡಿ ನೀರಿನ ಸಂಗ್ರಹ ಇದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.