ಭದ್ರಾವತಿ: ವಕ್ಫ್ ತಿದ್ದುಪಡಿ ಕಾಯ್ದೆ ಜಾರಿ ವಿರುದ್ಧ ಶುಕ್ರವಾರ ಅಂಜುಮನ್ ಇಸ್ಲಾಂ ವತಿಯಿಂದ ಬೃಹತ್ ಪ್ರತಿಭಟನೆ ನಡೆಸಲಾಯಿತು.
ಕೇಂದ್ರ ಸರ್ಕಾರವು ವಕ್ಫ್ ತಿದ್ದುಪಡಿ ಕಾಯ್ದೆ ಜಾರಿಗೆ ತಂದಿದ್ದು ಅಸಾಂವಿಧಾನಿಕ ನಡೆ. ಇದನ್ನು ಮರು ಪರಿಶೀಲಿಸಬೇಕು ಎಂದು ಸಂಘಟನೆಯ ಅಧ್ಯಕ್ಷ ಮುರ್ತುಜಾ ಖಾನ್ ಒತ್ತಾಯಿಸಿದರು.
ನಗರಸಭಾ ಸದಸ್ಯ ಬಿ.ಕೆ ಮೋಹನ್ ಮತನಾಡಿದರು. ಪ್ರತಿಭಟನೆಯಲ್ಲಿ ಮುಸಾಫೀರ್ ಭಾಷಾ, ಎ.ಬಿ.ಟಿ ಬಾಬು, ಅಮೀರ್ ಜಾನ್, ಬಾಬಾ ಜಾನ್, ಮಹಮ್ಮದ್ ಸನಾವುಲ್ಲಾ, ರಾಜೇಂದ್ರ, ಬಿ.ಕೆ ಜಗನ್ನಾಥ್ ಸೇರಿದಂತೆ ಇತರರು ಪಾಲ್ಗೊಂಡಿದ್ದರು.
ಮಾಧವಚಾರ್ ವೃತ್ತದಿಂದ ರಂಗಪ್ಪ ವೃತ್ತದವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಲಾಯಿತು. ರಂಗಪ್ಪ ವೃತ್ತದಲ್ಲಿ ತಹಶೀಲ್ದಾರ್ ಮೂಲಕ ಕೇಂದ್ರ ಸರಕಾರಕ್ಕೆ ಮನವಿ ಸಲ್ಲಿಸಲಾಯಿತು. ಪ್ರತಿಭಟನಾಕಾರರು ತೋಳುಗಳಿಗೆ ಕಪ್ಪುಪಟ್ಟಿ ಕಟ್ಟಿ, ವಕ್ಫ್ ಕಾಯ್ದೆ ತಿದ್ದುಪಡಿ ಹಿಂಪಡೆಯುವಂತೆ ಅಗ್ರಹಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.